ಸಮಾಜದಲ್ಲಿ ಭ್ರಷ್ಟಾಚಾರ ಸರ್ವವ್ಯಾಪಿ: ನ್ಯಾಯಾಧೀಶ ವಿಜಯೇಂದ್ರ ಕಳವಳ

Bel_Corruption
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಸಾಮಾಜಿಕ ಪಿಡುಗಾದ ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳು ಮಹತ್ವದ ಪಾತ್ರ ವಹಿಸಬೇಕು. ಭ್ರಷ್ಟಾಚಾರ ಸರ್ವ ವ್ಯಾಪಿಯಾಗಿದ್ದು, ಲಂಚ ತೆಗೆದುಕೊಳ್ಳುವುದಿಲ್ಲ ಮತ್ತು ಕೊಡುವುದಿಲ್ಲ ಎಂಬ ಪ್ರತಿಜ್ಞೆ ಮಾಡಬೇಕು. ಇದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರ ಸಹಾಯವನ್ನು ಪಡೆಯಬೇಕು ಎಂದು ಬೆಳ್ತಂಗಡಿ ಜೆ.ಎಂ.ಎಫ್.ಸಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ. ಎಚ್ ಹೇಳಿದರು.

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ವಾಣಿ ಪದವಿ ಪೂರ್ವ ಕಾಲೇಜಿನ ಕಾನೂನು ಸಾಕ್ಷರತಾ ಸಂಘದ ಸಂಯುಕ್ತ ಆಶ್ರಯದಲ್ಲಿ ಜರುಗಿದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ಬೆಳ್ತಂಗಡಿಯ ವಕೀಲ ಪ್ರಶಾಂತ್ ಎಂ ಮಾತನಾಡಿ, ಸಾಮಾನ್ಯ ಜನತೆಗೂ ಕಾನೂನಿನ ಅರಿವು ಮತ್ತು ನೆರವು ಸಿಗಬೇಕು. ಲೋಕ ಅದಾಲತ್, ಜನತಾ ನ್ಯಾಯಾಲಯ ಇವುಗಳ ಮೂಲಕ ನಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು. ಬಡವರು ಮಹಿಳೆಯರು ಮತ್ತು ಮಕ್ಕಳು ಉಚಿತ ಕಾನೂನು ನೆರವನ್ನು ಪಡೆಯಬಹುದು ಎಂದರು.

ಕಾಲೇಜಿನ ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಕಾನೂನು ಸಾಕ್ಷರತಾ ಸಂಘದ ಸಂಯೋಜಕಿ ಮೀನಾಕ್ಷಿ ಸ್ವಾಗತಿಸಿದರು. ಉಪನ್ಯಾಸಕಿ ಅನುರಾಧ ಕೆ ರಾವ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net