

ಚಿಕ್ಕೋಡಿ: ಸಮಾಜದಲ್ಲಿನ ಭ್ರಷ್ಟಾಚಾರ ತಡೆಗಟ್ಟುವಲ್ಲಿ ಕಾನೂನು ಪದವಿ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಪ್ರಾಚಾರ್ಯ ಡಾ.ಡಿ.ಬಿ.ಸೊಲ್ಲಾಪುರೆ ಹೇಳಿದರು.
ಇಲ್ಲಿನ ಕೆಎಲ್‌ಇ ಸಂಸ್ಥೆಯ ಕಾನೂನು ಮಹಾವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಐದು ದಿನಗಳ ಕೇಂದ್ರ ಜಾಗರೂಕತೆೆ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಕೇಂದ್ರ ಜಾಗರೂಕತೆ ದಿನಾಚರಣೆ ಅಂಗವಾಗಿ ಕೆನರಾ ಬ್ಯಾಂಕ್ ಹಾಗೂ ಬಿ.ಕೆ.ಕಾಲೇಜು ಕ್ಯಾಂಪಸ್ ಸಹಯೋಗದಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಬಳಿಕ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಸಂತೋಷ ರೆಡ್ಡಿ, ವಿಶ್ವನಾಥ ಧನವಾಡೆ, ಕೆನರಾ ಬ್ಯಾಂಕ್ ಶಾಖೆ ವ್ಯವಸ್ಥಾಪಕ ದತ್ತಾತ್ರೇಯ ಇತರರಿದ್ದರು. ಅಶ್ವಿನಿ ಕೋರಿ ನಿರೂಪಿಸಿದರು.