Cosmetic Surgery: ಮಂಗಳೂರು ವೈದ್ಯರ ಎಡವಟ್ಟಿನಿಂದ ಸರ್ಜರಿ ವೇಳೆ ಯುವಕ ಸಾವು

Cosmetic Surgery mangaluru youth end life
Published on

ಮಂಗಳೂರು:  ಬೆಂದೂರ್​ ವೆಲ್​ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್​​ಪ್ಲಾಂಟ್ ಕ್ಲಿನಿಕ್​​ನಲ್ಲಿ ಕಾಸ್ಮೆಟಿಕ್ ಸರ್ಜರಿ (Cosmetic Surgery) ವೇಳೆ ಯುವಕ ಮೃತಪಟ್ಟಿದ್ದಾನೆ. ಈ ಪ್ರಕರಣವನ್ನು ದ‌ಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ (Health Department) ಗಂಭೀರವಾಗಿ ಪರಿಗಣಿಸಿದೆ.

ಮುಹಮ್ಮದ್ ಮಾಝಿನ್ (32) ಮೃತ ಯುವಕ. ಉಳ್ಳಾಲದ ಅಕ್ಕರೆಕೆರೆ ನಿವಾಸಿಯಾಗಿದ್ದಾನೆ. ಎದೆ ಭಾಗ ಉಬ್ಬಿದ ಹಿನ್ನೆಲೆಯಲ್ಲಿ ಗೈನ್ ಇಕೋಮಸ್ಟಿಯಾ ಸರ್ಜರಿಗಾಗಿ ಆಸ್ಪತ್ರೆಗೆ ದಾಖಲಾಗಿ ಪ್ರಾಣ ಕಳೆದುಕೊಂಡಿದ್ದಾನೆ. ಕದ್ರಿ‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನಡೆದಿದ್ದೇನು?: ಮುಹಮ್ಮದ್ ಮಾಝಿನ್ ಅವರು ಮಂಗಳೂರು ನಗರದ ಕಂಕನಾಡಿಯ ಬೆಂದೂರ್ ವೆಲ್ ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್​​ಪ್ಲಾಂಟ್ ಕ್ಲಿನಿಕ್​ನಲ್ಲಿ ದಾಖಲಾಗಿದ್ದರು. ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. ಸಂಜೆಯಾದರು ಮುಗಿಯದ ಹಿನ್ನೆಲೆಯಲ್ಲಿ ಮಾಝಿನ್ ಪೋಷಕರು ಸಂಶಯಗೊಂಡು‌ ವಿಚಾರಿಸಿದಾಗ ಮುಹಮ್ಮದ್ ಮಾಝಿನ್ ಆರೋಗ್ಯದಲ್ಲಿ ಏರುಪೇರು ಆಗಿರುವ ಮಾಹಿತಿ ಬೆಳಕಿಗೆ ಬಂದಿದೆ.

ಪೋಷಕರು ಮುಹಮ್ಮದ್ ಮಾಝಿನ್​ನನ್ನು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಆಸ್ಪತ್ರೆ ವೈದ್ಯರು ಪರೀಕ್ಷಿಸಿದಾಗ ಮುಹಮ್ಮದ್ ಮಾಝಿನ್ ಮೃತಪಟ್ಟಿದ್ದಾರೆ. ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿದ್ದಾರೆ ಎಂದು ಪೋಷಕರು ಆರೋಪ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net