ಆರೋಗ್ಯ ಇಲಾಖೆಯಿಂದ ಕೋಟ್ಪಾ ಕಾರ್ಯಾಚರಣೆ

SRP_20-02jpj
Published on


ಶ್ರೀರಂಗಪಟ್ಟಣ : ತಾಲೂಕಿನ ಅರಕೆರೆ ವ್ಯಾಪ್ತಿಯಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಕೋಟ್ಪಾ ಕಾರ್ಯಾಚರಣೆ ನಡೆಸಿ ವಿವಿಧ ಪ್ರಕರಣಗಳಲ್ಲಿ ದಂಡ ವಿಧಿಸಿ 3,400 ರೂ. ಸಂಗ್ರಹಿಸಿದರು.
ನಿಯಮಬಾಹಿರವಾಗಿ ಶಾಲಾ, ಕಾಲೇಜುಗಳ ಬಳಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಬಳಕೆಯಲ್ಲಿದ್ದ ಅಂಗಡಿಗಳ ಮಾಲೀಕರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿದರು.
ನಿಯಮ ಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆಯಲ್ಲಿದ್ದವರಿಗೆ ಕರಪತ್ರ ವಿತರಿಸಿ ಜಾಗೃತಿ ಮೂಡಿಸಲಾಯಿತು.
ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ಟಿ.ಮಂಜುನಾಥ್, ಜಿಲ್ಲಾ ಆರೋಗ್ಯ ಸಲಹೆಗಾರ ಎಸ್.ಎನ್.ತಿಮ್ಮರಾಜು, ಪ್ರೌಢಶಾಲಾ ಉಪಪ್ರಾಂಶುಪಾಲ ಭೈರೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net