

ಕುಂದಾಪುರ: ವಂಡ್ಸೆ ಸಂಯೋಜಕ ವೃತ್ತದ ಕೋರ್ ವಿಷಯಗಳ ಸಮಾಲೋಚನೆ ಸಭೆ ವಂಡ್ಸೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಪ್ರಭಾರ ಮುಖ್ಯ ಶಿಕ್ಷಕ ಸದಾಶಿವ್ ಕೆಂಚನೂರು ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂಸಿ ಸಮನ್ವಯ ವೇದಿಕೆ ವತಿಯಿಂದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್. ಮತ್ತು ಕುಂದಾಪುರ ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ವಂಡ್ಸೆ ಶಾಲೆ ಸಹಶಿಕ್ಷಕ ಪ್ರತಾಪ್ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ ಮಾವಿನಗುಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕ ಗಣೇಶ್, ಕೆಪಿಎಸ್ ಶಾಲೆಯ ಸಹಶಿಕ್ಷಕಿ ಸಂಗೀತಾ ಉಪಸ್ಥಿತರಿದ್ದರು. ವಂಡ್ಸೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ ಸ್ವಾಗತಿಸಿದರು. ಕೊಲ್ಲೂರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶೈಲಜಾ ಕಾರ್ಯಕ್ರಮ ನಿರ್ವಹಿಸಿದರು.