ಬೆಂಗಳೂರು ವಿವಿ ಎಂ.ಇಡಿ ಪ್ರವೇಶಕ್ಕೆ 13ರಂದು ಕೌನ್ಸೆಲಿಂಗ್

Bangalore University (1)
Published on

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಎಂ.ಇಡಿ ಕೋರ್ಸ್ ಪ್ರವೇಶಕ್ಕೆ ಡಿ.13ರಂದು ಕೌನ್ಸೆಲಿಂಗ್ ನಡೆಸಲಾಗುತ್ತಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿ.10 ಮತ್ತು ಡಿ.11ರಂದು ಪ್ರಮಾಣಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಡಿ.12ರಂದು ಮೆರಿಟ್ ಪಟ್ಟಿ ಪ್ರಕಟಿಸಲಾಗುತ್ತದೆ. ಇದರ ಆಧಾರದ ಮೇಲೆ ಡಿ.13ರಂದು ಬೆಂಗಳೂರು ವಿವಿ ಶಿಕ್ಷಣ ವಿಭಾಗದಲ್ಲಿ ಕೌನ್ಸೆಲಿಂಗ್ ನಡೆಸಲಾಗುತ್ತದೆ. ಡಿ.14ರಂದು ಶುಲ್ಕ ಪಾವತಿಸಿ ಡಿ.15ರಂದು ಕಾಲೇಜು ಪ್ರವೇಶ ಪಡೆದುಕೊಳ್ಳುವಂತೆ ಬೆಂ.ವಿವಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net