ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ..

election
Published on

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಮಧ್ಯಾಹ್ನ 11.30ಕ್ಕೆ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಲಿದೆ. ಆ ಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಎಲ್ಲ ಹೊಸ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ, ಉದ್ಘಾಟನೆಗೆ ಬ್ರೇಕ್ ಬೀಳಲಿದೆ.

ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮತ್ತೊಂದು ಮತ ಸಮರಕ್ಕೆ ಇಳಿಯಲಿವೆ. ಬಿಜೆಪಿ ಈಗಾಗಲೇ ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದೆ. ಜೆಡಿಎಸ್ ಕೂಡ ಪ್ರಮುಖರ ಸಭೆ ನಡೆಸಿ ತೊಡೆ ತಟ್ಟಲು ರೆಡಿಯಾಗಿದೆ. ಕಾಂಗ್ರೆಸ್ ಈಗ ತಾನೆ ಚುನಾವಣಾ ತಯಾರಿಗೆ ಮುಂದಾಗಿದೆ.

ಸುಮಾರು 5800 ಗ್ರಾಮ ಪಂಚಾಯಿತಿಗಳ 85000 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಬೇರು ಮಟ್ಟದಲ್ಲಿ ಪಕ್ಷ ಬಲವರ್ಧನೆಗೆ ಈ ಚುನಾವಣೆ ಪ್ರಮುಖ‌ ಪಾತ್ರವಹಿಸಲಿದೆ. ಹಾಗಾಗಿ ಈ ಚುನಾವಣೆಯನ್ನು ಮೂರು ರಾಜಕೀಯ ಪಕ್ಷಗಳು ಪ್ರತಿಷ್ಠೆಯ ಪ್ರಶ್ನೆಯನ್ನಾಗಿಸಿಕೊಳ್ಳಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net