

ಕೋಲಾರ; ನಗರದಲ್ಲಿ ಫೆ.24 ಮತ್ತು 25ರಂದು ಎರಡು ದಿನಗಳ ಕಾಲ ನಡೆಯಲಿರುವ ರಾಜ್ಯಮಟ್ಟದ ಜಾನಪರ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.
ಉತ್ಸವದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಪಂ ಸಿಇಒ ಪ್ರವಿಣ್ ಪಿ.ಬಾಗೇವಾಡಿ, ಕನ್ನಡ ಮತ್ತು ಸಂಸತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ ಎನ್.ಛಲವಾದಿ, ಜಿ.ಪಂ ಉಪ ಕಾರ್ಯದರ್ಶಿ ಬಿ.ಶಿವಕುಮಾರ್ ಭಾನುವಾರ ಕಾರ್ಯಕ್ರಮ ಸಿದ್ಧತೆ ಪರಿಶೀಲಿಸಿದರು.
ೆ.24ರಂದು ಸೋಮವಾರ ಬೆಳಗ್ಗೆ 9.30ಕ್ಕೆ ನಗರದಲ್ಲಿನ ಬಂಗಾರಪೇಟೆ ವೃತ್ತದಿಂದ ಮೆರವಣಿಗೆ ಮೂಲಕ ಶುರುವಾಗುವ ಕಾರ್ಯಕ್ರಮ ಮಂಗಳವಾರ ಸಂಜೆ ಸಮಾರೋಪಗೊಳ್ಳಲಿದೆ.
ನಗರ ಟಿ.ಚನ್ನಯ್ಯ ರಂಗಮಂದಿರ ಮತ್ತು ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ರಾಜ್ಯದ ಬೇರೆ ಜಿಲ್ಲೆಗಳಿಂದ 40ಕ್ಕೂ ಹೆಚ್ಚು ಕಲಾ ತಂಡಗಳು, ಸ್ಥಳಿಯವಾಗಿಯೂ ಸೇರಿ 1500ಕ್ಕೂ ಹೆಚ್ಚು ಕಲಾವಿದರು ಭಾಗವಹಿಸುವ ನಿರೀೆ ಇದೆ.
ಆಗಮಿಸುವ ಮಹಿಳೆಯರಿಗೆ ಕೆಇಬಿ ಕಲ್ಯಾಣ ಮಂಟಪ, ವಾಲ್ಮೀಕಿ ಭವನ, ಒಳಾಂಗಣ ಕ್ರೀಡಾಂಗಣದಲ್ಲಿ ಹಾಗೂ ಪುರುಷರಿಗೆ ನಾರಾಯಣ ಕಲ್ಯಾಣ ಮಂಟಪದಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ. ನಚಿಕೇತನ ನಿಲಯದ ಆವರಣದಲ್ಲಿ ಊಟದ ವ್ಯವಸ್ಥೆ ಮಾಡಿದ್ದು, ಅಂಗವಿಕಲರು, ಹಿರಿಯ ನಾಗರಿಕರು ಸೇರಿ ಇತರರಿಗೆ ಪ್ರತ್ಯೇಕ ಕೌಂಟರ್ ಸ್ಥಾಪಿಸಲಾಗಿದೆ.
ಕಾರ್ಯಕ್ರಮಗಳೇನು..?
ಸೋಮವಾರ ಬೆಳಗ್ಗೆ 9.30ಕ್ಕೆ ಮೆರವಣಿಗೆಗೆ ಶಾಸಕ ಕೊತ್ತೂರು ಜಿ.ಮಂಜುನಾಥ್ ಚಾಲನೆ ನೀಡಲಿದ್ದು, ಜಾನಪದ ಕಲಾ ತಂಡಗಳ ಮೆರವಣಿಗೆಯು ಡೂಂ ಲೈಟ್, ಕ್ಲಾಕ್ ಟವರ್, ಹೊಸ ಬಸ್ ನಿಲ್ದಾಣ, ಎಂಬಿ ರಸ್ತೆ ಮೂಲಕ ಸಾಗಿ ರಂಗಮಂದಿರದ ಸಮೀಪ ಅಂತ್ಯಗೊಳ್ಳಲಿದೆ. 11.30ಕ್ಕೆ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಉದ್ಘಾಟಿಸಲಿದ್ದಾರೆ. ಶಾಸಕ ಕೊತ್ತೂರು ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 3ಕ್ಕೆ ರಾಜ್ಯಮಟ್ಟದ ಕವಿಗೋಷ್ಠಿ ನಡೆಯಲಿದ್ದು, ಸಾಹಿತಿ ಸುಬ್ಬು ಹೊಲೆಯಾರ್ ಅಧ್ಯಕ್ಷತೆ, ಸಾಹಿತಿ ಕೋಟಗಾನಹಳ್ಳಿ ರಾಮಯ್ಯ ಉದ್ಘಾಟನೆ, ಡಾ.ನೇತ್ರಾವತಿ ಆಶಯ ನುಡಿ ಆಡಲಿದ್ದಾರೆ.
ಸಂಜೆ 4.30ಕ್ಕೆ "ಹಾಡು ಹುಟ್ಟಿದ ಳಿಗೆ' ಕಾರ್ಯಕ್ರಮದಲ್ಲಿ ಗಾಯನ ಹಾಗೂ ಕೋಟಗಾನಹಳ್ಳಿ ರಾಮಯ್ಯ ಅವರ "ಕಲ್ ಕಮಲ್ ಕಲೇ ಪರಾಕ್' ನಾಟಕ ಪ್ರದರ್ಶನಗೊಳ್ಳಲಿದೆ. ಸಂಜೆ 4ಕ್ಕೆ ಜೂನಿಯರ್ ಕಾಲೇಜು ಮೈದಾನದಲ್ಲಿ ಜನಪರ, ಜಾನಪದ ಮತ್ತು ಗೀತ ಗಾಯನ ಸಂಭ್ರಮ ನಡೆಯಲಿದೆ.
ಫೆ.25ರಂದು ಬೆಳಗ್ಗೆ 10.30ಕ್ಕೆ ರಂಗಮಂದಿರದಲ್ಲಿ ಬೆಳಗಾವಿ ರಾಧಾಬಾಯಿ ಮಾದರ ಮತ್ತು ತಂಡದಿಂದ, ಚೌಡಿಕೆ ಪದಗಳು, ನಂತರ ಸಮಕಾಲೀನ ಸಂದರ್ಭದಲ್ಲಿ ದಲಿತ ಸಮುದಾಯದ ಮುಂದಿರುವ ಸಾಮಾಜಿಕ, ಸಾಂಸತಿಕ ಮತ್ತು ರಾಜಕೀಯ ತಲ್ಲಣಗಳು ಕುರಿತು ವಿಚಾರ ಗೋಷ್ಠಿ ನಡೆಯಲಿದೆ. ಚಿಕ್ಕಬಳ್ಳಾಪುರ ದಲಿತ ಮುಖಂಡ ಎನ್.ವೆಂಕಟೇಶ್ ಉದ್ಘಾಟಿಸಲಿದ್ದು, ಸಂಪಾದಕ ಇಂದೂಧರ ಹೊನ್ನಾಪುರ ಅಧ್ಯಕ್ಷತೆ, ದಲಿತ ಸಂರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಆಶಯ ನುಡಿ ಆಡಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ದಲಿತ ಸಾಮಾಜಿಕ ಅಸ್ಮಿತೆ, ಸಾಂಸತಿಕ ಅಸ್ಮಿತೆ ವಿಚಾರ ಕುರಿತು ಚರ್ಚೆಯಾಗಲಿದೆ. ಮಧ್ಯಾಹ್ನ 1.30ಕ್ಕೆ ಸಂವಾದ ನಡೆಯಲಿದ್ದು, ಮಧ್ಯಾಹ್ನ 2.30ಕ್ಕೆ ಜಾನಪದ ಗಾಯನ, ಸಂಜೆ 4ಕ್ಕೆ ಜನಪರ, ಜನಪದ ಮತ್ತು ಗೀತ ಗಾಯನ ಸಂಭ್ರಮವನ್ನು ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದು, ಸಂಜೆ 6ಕ್ಕೆ ಸಮಾರೋಪ ಸಮಾರಂಭ ಇದ್ದು, ಜಾನಪದ ನೃತ್ಯ, ನೃತ್ಯ ರೂಪಕ, ದೇವನಾಮ್ ಪ್ರಿಯ&ಸಾಮ್ರಾಟ ಅಶೋಕ ನಾಟಕ ಪ್ರದೇಶನ ಏರ್ಪಡಿಸಲಾಗಿದೆ.
ನೆಲದ ಸೊಗಡು ಬಿಂಬಿಸುವ ಕಾರ್ಯಕ್ರಮ
ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋಲಾರದವರು ಅನ್ನದಾತರಲ್ಲದೇ ಚಿನ್ನದಾತರೂ ಹೌದು. ನೀರು ಕೇಳಿದರೆ ಪಾನಕ ಕೊಟ್ಟು ಸತ್ಕರಿಸುವ ಜನ, ಇದೇ ಭಾವನೆಯಲ್ಲಿ ಪ್ರತಿಯೊಬ್ಬರೂ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಕಲಾವಿದರ ಜತೆಗೆ ಸ್ಥಳಿಯವಾಗಿ 3000ಕ್ಕೂ ಹೆಚ್ಚು ಜನ ಆಗಮಿಸುವ ನಿರೀೆ ಇದೆ. ಎರಡೂ ದಿನ ಜಿಲ್ಲೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಲಿದ್ದು, ಸಂಚಾರಿ ಮಾರ್ಗವನ್ನು ಬದಲಿಸಲಾಗಿದೆ. ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಕೋರಿದರು.
ಸಿಇಒ ಡಾ.ಪ್ರವಿಣ್ ಪಿ.ಬಾಗೇವಾಡಿ, ಉಪ ಕಾರ್ಯದರ್ಶಿ ಶಿವಕುಮಾರ್, ಕನ್ನಡ ಮತ್ತು ಸಂಸತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ ಛಲವಾದಿ, ಸಹಾಯಕ ನಿರ್ದೇಶಕಿ ವಿಜಯಲಕ್ಷಿ$್ಮ, ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.
93 ಲಕ್ಷ ರೂ. ಬಿಡುಗಡೆ
ಕಾರ್ಯಕ್ರಮಕ್ಕೆ ಸರ್ಕಾರ 93 ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದು, ಕರ್ಚುವೆಚ್ಚ ಸೇರಿ ಆಗಮಿಸಿರುವ ಕಲಾವಿದರಿಗೆ ಸಂಭಾವನೆ ಕೊಡಬೇಕಿದೆ. ದಾನಿಗಳಿಗೂ ಜವಾಬ್ದಾರಿ ವಹಿಸಲಾಗಿದೆ ಎಂದು ಡಿಸಿ ಹೇಳಿದರು.