

ಮಂಗಳೂರು : ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಜೂ. 4 ರಂದು ನಡೆಯಲಿದ್ದು ಮತ ಎಣಿಕೆ ಕೇಂದ್ರದ ಸಿದ್ದತೆ ಕುರಿತು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಭ್ಯರ್ಥಿಗಳ ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು ‘ ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ತಮ್ಮ ಚುನಾವಣಾ ಏಜೆಂಟ್ ,ಮತ ಎಣಿಕಾ ಏಜೆಂಟರಿಗೆ ಕಡ್ಡಾಯವಾಗಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ತಿಳಿಸಬೇಕು ಎಂದರು.
ಚುನಾವಣಾ ಆಯೋಗದ ಎಲ್ಲ ನಿಯಮಗಳನ್ನು ಪಾಲಿಸುವ ಮೂಲಕ ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಯಲು
ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಹಕಾರ ನೀಡಬೇಕೆಂದು ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಸಂತೋಷ ಕುಮಾರ್ , ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಪಕ್ಷೇತರ ಅಭ್ಯರ್ಥಿಗಳು
ಭಾಗವಹಿಸಿದ್ದರು.
.............