

ಅಥಣಿ: ಗಡಿ ಕಾಯುವ ಯೋಧ, ಅನ್ನ ನೀಡುವ ರೈತ ಮತ್ತು ಮಾರ್ಗದರ್ಶನ ನೀಡುವ ಶಿಕ್ಷಕರು ತ್ರಿನೇತ್ರಗಳಿದ್ದಂತೆ ಎಂದು ಶೆಟ್ಟರಮಠದ ಮರುಳಸಿದ್ದ ಸ್ವಾಮೀಜಿ ಹೇಳಿದರು.
ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾವಿಕಾಸ ಸಂಸ್ಥೆಯಿಂದ ಭಾನುವಾರ ಹಮ್ಮಿಕೊಂಡಿದ್ದ ‘ರಾಷ್ಟ್ರ ರಕ್ಷಕರಿಗೆ ನಮನ ಹಾಗೂ ನಿವೃತ್ತ ಸೈನಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶ ರಕ್ಷಣೆ ಭಾರತೀಯನ ಜವಾಬ್ದಾರಿ ಎಂದರು.
ರಾಷ್ಟ್ರಪ್ರಶಸ್ತಿ ಪುರಸ್ಕೃತ ವಿಜ್ಞಾನ ಶಿಕ್ಷಕ ಸುಭಾಷ ಮುನ್ನೋಳಿ ಮಾತನಾಡಿದರು. ಡಿ.ಡಿ.ಮೆಕನಮರಡಿ ಮಾತನಾಡಿದರು. ಮಾಜಿ ಸೈನಿಕರ ಸಂಘದ ಸದಸ್ಯರನ್ನು ಸನ್ಮಾನಿಸಲಾಯಿತು.