

ಶಿವಮೊಗ್ಗ: ದೇಶ ಇನ್ನೂ ರಾಮರಾಜ್ಯವಾಗಿಲ್ಲ. ಕೆಲವೊಂದು ಇಲಾಖೆಗಳಲ್ಲಿ ಇನ್ನೂ ಭ್ರಷ್ಟಾಚಾರ ನಡೆಯುತ್ತಲೇ ಇದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಯಾವುದೇ ಸರ್ಕಾರ ಇದ್ದರೂ ಕೆಲ ಇಲಾಖೆಗಳಲ್ಲಿ ಇನ್ನೂ ಭ್ರಷ್ಟಾಚಾರ ನಡೆಯುತ್ತಿದೆ. ಭ್ರಷ್ಟಾಚಾರವೇ ಇಲ್ಲ ಎಂದು ಹೇಳುತ್ತಿದ್ದರೆ ಅದು ಶುದ್ಧ ಸುಳ್ಳು. ಇದನ್ನೇ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಜಾತಿ ಗಣತಿ ವರದಿ ಬಿಡುಗಡೆ ಮಾಡುವುದಾಗಿ ಕಾಂಗ್ರೆಸ್ ನಾಯಕರು ಪದೇಪದೆ ಹೇಳಿಕೆ ನೀಡುತ್ತಿದ್ದಾರೆ. ಎಂಟು ವರ್ಷ ಅಧಿಕಾರ ನಡೆಸಿದ್ದಾರೆ. ನವೆಂಬರ್ ತಿಂಗಳಲ್ಲಿ ವರದಿ ಬಿಡುಗಡೆಯ ಭರವಸೆ ನೀಡಿದ್ದರು. ಆದರೆ ವರದಿ ಬಿಡುಗಡೆ ಮಾಡುತ್ತಿಲ್ಲ. ಈ ಮೂಲಕ ಹಿಂದುಳಿದವರ ಮೂಗಿಗೆ ತುಪ್ಪ ಸವರುತ್ತಿದ್ದಾರೆ ಎಂದು ದೂರಿದರು.