ಮೋದಿ ಆಡಳಿತದಲ್ಲಿ ದೇಶದ ಘನತೆ ವೃದ್ಧಿ: ಬಿವೈಆರ್

bjp
ಸೇವಾ ಪಾಕ್ಷಿಕದ ಅಂಗವಾಗಿ ಬಿಜೆಪಿ ಓಬಿಸಿ ಮೋರ್ಚಾದಿಂದ ಏರ್ಪಡಿಸಿದ್ದ ಪ್ರದರ್ಶಿನಿಯನ್ನು ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು. ಎಸ್.ಎನ್.ಚನ್ನಬಸಪ್ಪ, ಮಾಲತೇಶ್, ಸುಧಾಕರ್, ಪ್ರದೀಪ್, ಮೋಹನ್ ರೆಡ್ಡಿ ಇದ್ದರು.
Published on

ಶಿವಮೊಗ್ಗ: ಪಂಡಿತ್ ದೀನದಯಾಳು ಉಪಾಧ್ಯಾಯ ಅವರ ಅಂತ್ಯೋದಯ ಪರಿಕಲ್ಪನೆಯನ್ನು ಸಾಕಾರಗೊಳಿಸಿದವರು ಪ್ರಧಾನಿ ನರೇಂದ್ರ ಮೋದಿ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಸೇವಾ ಪಾಕ್ಷಿಕದ ಅಂಗವಾಗಿ ಕೇಂದ್ರ ಸರ್ಕಾರದ ಯೋಜನೆಗಳನ್ನು ವಿವರಿಸುವ ಪ್ರದರ್ಶಿನಿಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಎಲ್ಲ ರೀತಿಯ ಸವಲತ್ತು ದೊರೆತು ಆತ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಉಪಾಧ್ಯಾಯರು ಬಯಸಿದ್ದರು. ಮೋದಿ ಹಿಂದುಳಿದ, ದೀನ ದಲಿತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದರು ಎಂದು ಹೇಳಿದರು.

ಆಯುಷ್ಮಾನ್, ಕಿಸಾನ್ ಸಮ್ಮಾನ್, ಪಿಎಂ ಸ್ವನಿಧಿ ಮುಂತಾದ ಯೋಜನೆಗಳು ಎಲ್ಲ ಜಾತಿ, ವರ್ಗಗಳ ಬಡ ಜನರಿಗೆ ಆಧಾರವಾಗಿವೆ. ಮೋದಿ ಪ್ರಧಾನಿಯಾದ ಬಳಿಕ ಭಾರತದ ಬಲಾಢ್ಯವಾಗಿ ರೂಪುಗೊಂಡಿದೆ. ವಿಶ್ವಮಟ್ಟದಲ್ಲಿ ಭಾರತದ ಘನತೆ ಮತ್ತಷ್ಟು ಹೆಚ್ಚಾಗಿದೆ. ರಾಜತಾಂತ್ರಿಕವಾಗಿ ಭಾರತ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು.

ಕೆಲವರು ತಾವೇ ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಸ್ವಪ್ರಶಂಸೆ ಮಾಡಿಕೊಳ್ಳುತ್ತಾರೆ. ಅಂತಹ ವ್ಯಕ್ತಿಗಳು ಹಿಂದುಳಿದವರನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡರೆ ವಿನಃ ಹಿಂದುಳಿದವರನ್ನು ಮೇಲೆತ್ತಲು ಯಾವುದೇ ಕೆಲಸ ಮಾಡಲಿಲ್ಲ. ಆದರೆ ಈ ವಿಷಯದಲ್ಲಿ ನರೇಂದ್ರ ಮೋದಿ ತುಂಬಾ ಭಿನ್ನವಾಗಿದ್ದಾರೆ ಎಂದು ಹೇಳಿದರು.

ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ ಒಬಿಸಿ ಮೋರ್ಚಾದ ಜಿಲ್ಲಾಧ್ಯಕ್ಷ ಸುಧಾಕರ್, ನಗರಾಧ್ಯಕ್ಷ ಪ್ರದೀಪ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಮೋಹನ್ ರೆಡ್ಡಿ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net