ಬಳ್ಳಾರಿ : ಕೆಕೆಆರ್‌ಟಿಸಿ ಬಸ್‌ಯೊಂದು ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬೈಕ್‌ನಲ್ಲಿದ್ದ ದಂಪತಿಯು ಸ್ಥಳದಲ್ಲೇ ಮೃತಪಟ್ಟ ಘಟನೆ ಸಿರಗುಪ್ಪ ತಾಲೂಕಿನ ಕುಡುದರಹಾಳ್ ಗ್ರಾಮದ ಬಳಿ ಸೋಮವಾರ ನಡೆದಿದೆ.
ತಾಲೂಕಿನ ಬೊಮ್ಮಲಾಪುರ ಗ್ರಾಮದ ನಿವಾಸಿಗಳಾದ ನಾಗಭೂಷಣ (35), ಸಂಧ್ಯಾ (32) ಮೃತರು. ದಂಪತಿಯು ಬೈಕ್‌ನಲ್ಲಿ ಕುಡದರಹಾಳ್ ಗ್ರಾಮದಿಂದ ಸಿರಗುಪ್ಪ ಕಡೆಗೆ ಸಂಚರಿಸುತ್ತಿದ್ದರು. ವೇಗವಾಗಿ ಚಲಿಸುತ್ತಿದ್ದ ಬಸ್ ರಭಸದಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ. ಈ ಕುರಿತು ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
==