ಬಸ್‌ಗಳು ಡಿಕ್ಕಿಯಾಗಿ ದಂಪತಿಗೆ ಗಾಯ

bus
Published on

ನೆಲ್ಯಾಡಿ: ಇಲ್ಲಿನ ಅಡ್ಡಹೊಳೆ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದಂಪತಿ ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಮತ್ತು ಬೆಂಗಳೂರಿನಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ಗಳ ನಡುವೆ ಅಡ್ಡಹೊಳೆ ಪೆಟ್ರೋಲ್ ಬಂಕ್ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಹಾಸನ ಮೂಲದ ದಂಪತಿ ನಾಗೇಂದ್ರ ಪ್ರಸಾದ್(60) ಮತ್ತು ಭಾರತಿ(54) ಗಾಯಾಳುಗಳು. ಅವರನ್ನು ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net