

ಮೈಸೂರು: ಕೂರ್ಗಳ್ಳಿ ಬಳಿಯ ರಿಂಗ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಗಾಯಗೊಂಡಿದ್ದಾರೆ.
ಕೂರ್ಗಳ್ಳಿ ನಿವಾಸಿಗಳಾದ ಚಂದ್ರ(59), ಪ್ರೇಮಾ(41) ಗಾಯಾಳುಗಳು. ಇವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಸ್ಥಳಕ್ಕೆ ವಿ.ವಿ.ಪುರಂ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.