ಅಪಘಾತದಲ್ಲಿ ದಂಪತಿಗೆ ಗಂಭೀರ ಗಾಯ

accident-15
Published on

ನರಗುಂದ: ಬೈಕ್​ಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ ಗಂಡ-ಹೆಂಡತಿ ಇಬ್ಬರೂ ಗಂಭೀರ ಗಾಯಗೊಂಡಿರುವ ಘಟನೆ ಪಟ್ಟಣದ ಸರ್ವಜ್ಞ ಸರ್ಕಲ್​ನಲ್ಲಿ ಶುಕ್ರವಾರ ಸಂಭವಿಸಿದೆ. ರಾಮದುರ್ಗ ತಾಲೂಕಿನ ಕಿತ್ತೂರ ಗ್ರಾಮದ ಮಲ್ಲಿಕಾರ್ಜುನ ದೊಡ್ಡ ಭೀಮಪ್ಪ ಮುದೇನೂರ ಹಾಗೂ ಆತನ ಪತ್ನಿ ಸವಿತಾ ಮುದೇನೂರ ಗಾಯಗೊಂಡಿದ್ದು, ಇಬ್ಬರನ್ನು ಹುಬ್ಬಳ್ಳಿಯ ಕಿಮ್್ಸ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳು ಮಲ್ಲಿಕಾರ್ಜುನ ದ್ವಿಚಕ್ರ ವಾಹನದಲ್ಲಿ ಪತ್ನಿಯೊಂದಿಗೆ ಶುಕ್ರವಾರ ಬೆಳಗ್ಗೆ ನರಗುಂದಕ್ಕೆ ಆಗಮಿಸಿದ್ದರು. ಬ್ಯಾಂಕ್​ನಲ್ಲಿ ಹಣ ಪಡೆದು ಪತ್ನಿಯೊಂದಿಗೆ ಕಿತ್ತೂರಿಗೆ ತೆರಳುತ್ತಿದ್ದಾಗ ಬೈಕ್ ಹಾಗೂ ಮಹಾರಾಷ್ಟ್ರ ಮೂಲದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಈ ಕುರಿತು ನರಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್​ಐ ಎಫ್.ಎಸ್. ಮಣ್ಣೂರ ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net