

ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗದ ಕಲಾವಿದರು ಹಾಗೂ ತಂತ್ರಜ್ಞರಿಗೆ ನೆರವಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೆರವಿನ ಕೂಪನ್ ಬಿಡುಗಡೆ ಮಾಡಿದ್ದಾರೆ.
ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವ ಸಿನಿಮಾ ಕಾರ್ವಿುಕರಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ದಿನನಿತ್ಯದ ಅಗತ್ಯದ ಆಹಾರ ಪದಾರ್ಥಗಳನ್ನು ಕೊಳ್ಳುವುದಕ್ಕೆ ಆರು ಸಾವಿರ ಕಾರ್ವಿುಕರಿಗೆ ಕೂಪನ್ ನೀಡಿದೆ. ಶುಕ್ರವಾರ ಸಂಜೆ ನಡೆದ ಸಭೆಯಲ್ಲಿ ಯಡಿಯೂರಪ್ಪ ಅವರು 1,500 ರೂ.ಗಳ ಈ ಕೂಪನ್ ಬಿಡುಗಡೆ ಮಾಡಿದ್ದಾರೆ.
ಮುಖ್ಯಮಂತ್ರಿಗಳು ಮತ್ತು ಅವರ ಮಗ ವಿಜಯೇಂದ್ರ ಅವರ ಸಹಾಯದಿಂದ ಸಿನಿಮಾ ಕಾರ್ವಿುಕರಿಗೆ ಕೂಪನ್ ಸಿಕ್ಕಿದೆ. ಸದ್ಯದಲ್ಲೇ ಈ ಕೂಪನ್ಗಳನ್ನು ಚಿತ್ರರಂಗದ 27 ವಲಯಗಳ ಆರು ಸಾವಿರ ಕಾರ್ವಿುಕರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ತಿಳಿಸಿದರು. ನಟಿ ತಾರಾ, ರಾಕ್ಲೈನ್ ವೆಂಕಟೇಶ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ಸೇರಿ ಹಲವರು ಉಪಸ್ಥಿತರಿದ್ದರು.