ನ್ಯಾಯಾಂಗ ಇಲಾಖೆ ನೌಕರರ ಸಂಭ್ರಮಾಚರಣೆ

court
Published on

ಮಡಿಕೇರಿ:

ನ್ಯಾಯಾಂಗ ಇಲಾಖಾ ನೌಕರರ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರು ಮಂಗಳವಾರ ಗೆಲುವಿನ ಸಂಭ್ರಮಾಚರಣೆ ನಡೆಸಿದರು. ಕೊಡಗು ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘ ಮತ್ತು ನ್ಯಾಯಾಂಗ ಇಲಾಖಾ ನೌಕರರ ಸಂಘದ ವತಿಯಿಂದ ಭಾನುವಾರ ಜಿಲ್ಲಾ ಮಟ್ಟದ ಕ್ರೀಡಾ ಕೂಟವನ್ನು ಮಡಿಕೇರಿಯಲ್ಲಿರುವ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

ಮಡಿಕೇರಿ, ವಿರಾಜಪೇಟೆ, ಕುಶಾಲನಗರ, ಪೊನ್ನಂಪೇಟೆ ಹಾಗೂ ಸೋಮವಾರಪೇಟೆ ನ್ಯಾಯಾಲಯದ ನೌಕರರು ಅಲ್ಲದೆ ವಕೀಲರು ಹಾಗೂ ನ್ಯಾಯಾಧೀಶರು ಕೂಡ ಗುಂಪು ಕ್ರೀಡೆಯಲ್ಲಿ ಭಾಗವಹಿಸಿದ್ದರು.

ಮಡಿಕೇರಿ ನ್ಯಾಯಾಲಯ ತಂಡ ಪುರುಷರ ಕಬಡ್ಡಿ, ವಾಲಿಬಾಲ್, ಮಹಿಳೆಯರ ಥ್ರೋಬಾಲ್, ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಏರ್ಪಡಿಸಲಾಗಿತ್ತು.

ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷÀ ಜಯಪ್ಪ, ಜಿಲ್ಲೆಯ ವಕೀಲರು, ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿಗೆ ಕ್ರೀಡಾ ಕೂಟ ಆಯೋಜಿಸಿದ್ದು, ತುಂಬಾ ಯಶಸ್ವಿಯಾಗಿ ಕ್ರೀಡಾಕೂಟ ನಡೆಯಿತು ಎಂದರು.

ನ್ಯಾಯಾAಗ ಇಲಾಖೆ ನೌಕರರ ಸಂಘದ ಅಧ್ಯಕ್ಷ ಕೆ.ಕೆ.ಬೋಪಯ್ಯ, ಉಪಾಧ್ಯಕ್ಷ ಮಂಜುನಾಥ್ ಪೂಜಾರ, ಪ್ರಮುಖರಾದ ಎ.ಜೆ. ಸ್ಟಾನಿ, ಬಸವರಾಜ್ ಘಂಟೀಮಠ್, ಕೆ.ಎ.ಚಂಗಪ್ಪ, ಬಿ.ಕೆ. ರೋಹಿಣಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net