ಪಾಲಿಕೆ ಅಭ್ಯರ್ಥಿ ಆಯ್ಕೆಯೇ ಅಸಿಂಧು: ನ್ಯಾಯಾಲಯದಿಂದ ಆದೇಶ..

Court
Published on

ಕಲಬುರಗಿ: ಪಾಲಿಕೆ ಸದಸ್ಯರೊಬ್ಬರ ಆಯ್ಕೆಯನ್ನು ಅಸಿಂಧುಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಕಲಬುರಗಿ ಮಹಾನಗರ ಪಾಲಿಕೆ ವಾರ್ಡ್-36ರ ವಿಜೇತ ಅಭ್ಯರ್ಥಿ ಆಯ್ಕೆಯನ್ನು ಅಸಿಂಧುಗೊಳಿಸಿ, ಕಲಬುರಗಿ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.

ಪಕ್ಷೇತರ ಅಭ್ಯರ್ಥಿ ಶಂಭುಲಿಂಗ ಬಳಬಟ್ಟಿ ಅವರು ಕಲಬುರಗಿ ಮಹಾನಗರ ಪಾಲಿಕೆ ವಾರ್ಡ್-36ರಲ್ಲಿ ಸ್ಪರ್ಧಿಸಿ ಆಯ್ಕೆ ಆಗಿದ್ದರು. ಆದರೆ ಅವರು ಸುಳ್ಳು ಅಪಿಢವಿಟ್ ಸಲ್ಲಿಸಿದ್ದರು ಎಂದು ಆರೋಪಿಸಿ ಬಿಜೆಪಿಯ ಸೂರಜ್ ತಿವಾರಿ ನ್ಯಾಯಾಲಯದ ಮೊರೆ ಹೋಗಿದ್ದರು.

ನಾಮಪತ್ರ ಸಲ್ಲಿಸುವಾಗ ಆಸ್ತಿ, ವಿದ್ಯಾರ್ಹತೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಮಾಹಿತಿ ನೀಡಿರಲಿಲ್ಲ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಆ ಮೇರೆಗೆ ವಿಚಾರಣೆ ನಡೆಸಿದ್ದ ನ್ಯಾಯಾಲಯ ಆಯ್ಕೆಯನ್ನು ಅಸಿಂಧುಗೊಳಿಸಿ ಆದೇಶ ನೀಡಿತ್ತು. ಶಂಭುಲಿಂಗ ಬಳಬಟ್ಟಿ ಅವರು ಪಾಲಿಕೆ ಚುನಾವಣೆಯಲ್ಲಿ ಗೆದ್ದರೂ ಇನ್ನೂ ಅಧಿಕಾರ ಸ್ವೀಕರಿಸಿರಲಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net