ಮನೆಯವರನ್ನು ಕೊಲ್ಲುತ್ತೇನೆಂದು ಹೆದರಿಸಿ ಯುವತಿ ಮೇಲೆ ಅತ್ಯಾಚಾರ; ಆರೋಪಿಗೆ ಕಠಿಣ ಶಿಕ್ಷೆ

accused
Published on

ಬೆಂಗಳೂರು: ನಿಮ್ಮ ಮನೆಯವರನ್ನು ಕೊಲ್ಲುತ್ತೇನೆಂದು ಹೆದರಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಹತ್ತು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಕೋರ್ಟ್​ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ: ಬೆಂಗಳೂರಿನ ಬನಶಂಕರಿಯ ಇಟ್ಟಮಡಗು ನಿವಾಸಿ ಬಾಬು ಅಲಿಯಾಸ್ ಚಿಟ್ಟಿ ಬಾಬು 2018ರಲ್ಲಿ 17 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ. ಈತನಿಗೆ ಮದುವೆಯಾಗಿ ಎರಡು ಮಕ್ಕಳಿದ್ದರೂ, ನಿಮ್ಮ ಮನೆಯವರನ್ನು ಕೊಲ್ಲುತ್ತೇನೆಂದು ಯುವತಿಗೆ ಹೆದರಿಸಿ ಅತ್ಯಾಚಾರ ಮಾಡಿದ್ದಾನೆ.

ಈ ಸಂಬಂಧ 2018ರಲ್ಲಿ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. FTSC (ಫಾಸ್ಟ್ ಟ್ರ್ಯಾಕ್ ಸ್ಪೆಷಲ್ ಕೋರ್ಟ್ಸ್) ಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀಮತಿ ಇಷ್ರತ್ ಜಹಾನ್ ಅವರು, ಆರೀಪಿಗೆ ಹತ್ತು ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು ಐದು ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net