

ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಗುಜರಿ ಮಾರಾಟದಲ್ಲಿ ೧೪ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದ್ದು, ತನಿಖೆ ನಡೆಸುವಂತೆ ಉಡುಪಿ ಜಿಲ್ಲಾ ರೈತ ಸಂಘವು ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದೆ. ಬೆಜೆಪಿ ಬೆಂಬಲಿತ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದು, ತನಿಖೆ ನಡೆಸುವಂತೆ ಮನವಿ ಮಾಡಿದೆ.
ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ, ವಂಚನೆ ಆಗಿದೆಯೇ? ಇಲ್ಲವೇ ಎಂಬ ಕುರಿತು ತನಿಖೆ ನಡೆಸಿ ಡಿಸೆಂಬರ್ ೧೨ರೊಳಗೆ ನ್ಯಾಯಾಲಯಕ್ಕೆ ವರದಿ ನೀಡುವಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಆದೇಶಿಸಿದೆ. ವಕೀಲ ಆರ್.ಜಗನ್ನಾಥ ವಾದ ಮಂಡಿಸಿದ್ದರು.
ಕಾರ್ಖಾನೆಯಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆ ನಡೆಸುವಂತೆ ಆಗ್ರಹಿಸಿ ಅ.೧೦ರಂದು ರೈತ ಸಂಘಟನೆ ಪದಾಧಿಕಾರಿಗಳು ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಬ್ರಹ್ಮಾವರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು.