ಮಾತು ಕೇಳದವರ ವಿರುದ್ಧ ದಂಡಾಸ್ತ್ರ

Sudhakar 10 March 20
Published on

ಸಭೆ- ಸಮಾರಂಭಗಳ ಮೇಲೆ ಹೆಚ್ಚಿನ ನಿಗಾ | ಇನ್ನೆರಡು ದಿನದಲ್ಲಿ ಆದೇಶ

ಬೆಂಗಳೂರು: ಕರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಮಾಸ್ಕ್ ಧರಿಸದ, ಅಂತರ ಕಾಯ್ದುಕೊಳ್ಳದ, ಸಭೆ- ಸಮಾರಂಭ ನೆಪದಲ್ಲಿ ಜನದಟ್ಟಣೆಗೆ ಅವಕಾಶ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ದಂಡ ಪ್ರಯೋಗ ತೀವ್ರಗೊಳಿಸುವ ಬಗ್ಗೆ ಚರ್ಚೆ ನಡೆಸಿದರು.

ಸಭೆ ಮುಖ್ಯಾಂಶ 1 ಅಂತ್ಯಸಂಸ್ಕಾರದಲ್ಲಿ ಮೃತರ ಕುಟುಂಬದ ಸದಸ್ಯರು ಪಿಪಿಇ ಧರಿಸಿ ಪಾಲ್ಗೊಳ್ಳಲು ಅನುಮತಿ. 2 ಟೆಸ್ಟಿಂಗ್ ಪ್ರಮಾಣ ಮೂರುಪಟ್ಟು ಹೆಚ್ಚಿಸಲು ಪ್ರಧಾನಿ ಸೂಚಿಸಿದ್ದು, ಡಿಸಿಗಳಿಗೆ ಸೂಚನೆ. 3 ಕರೊನ ಸೋಂಕಿನ ಜಾಗೃತಿ ಮೂಡಿಸಲು ಮಾಧ್ಯಮದವರಿಗಾಗಿ ವಿಶೇಷ ಕಾರ್ಯಾಗಾರ.

ಸಭೆ ಬಳಿಕ ಸುಧಾಕರ್ ಮಾಹಿತಿ ನೀಡಿ, ಕರೊನಾ ನಿಯಂತ್ರಣ ಕ್ರಮಗಳ ಬಗ್ಗೆ ಸರ್ಕಾರ ಹೊರಡಿಸಿದ ಮಾರ್ಗಸೂಚಿ ನಿರ್ಲಕ್ಷ್ಯ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ತೀರ್ವನಿಸಿದೆ. ಸಿಎಂ ಜತೆ ರ್ಚಚಿಸಿ ಒಂದೆರಡು ದಿನದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು. ಇತ್ತೀಚೆಗೆ ರಾಜಕೀಯ, ಧಾರ್ವಿುಕ, ಸಾಂಸ್ಕೃತಿಕ ಸಭೆ- ಸಮಾರಂಭಗಳು ಹೆಚ್ಚಾಗಿದ್ದು, ಜನರು ಗುಂಪುಗೂಡಿ ಭಾಗವಹಿಸುತ್ತಿದ್ದಾರೆ. ಇದರಿಂದ ಸೋಂಕು ವೇಗವಾಗಿ ಹರಡುತ್ತಿರುವುದು ಗಮನಕ್ಕೆ ಬಂದಿದೆ. ಇಂಥ ಸಮಾರಂಭಗಳಿಗೆ ಕಡಿವಾಣ ಹಾಕಲು ತೀರ್ವನಿಸಲಾಗಿದೆ ಎಂದು ಹೇಳಿದರು. ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಡಳಿತಗಳ ಜತೆ ಸಮಾಲೋಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಈಗಾಗಲೆ ತಜ್ಞರು ಮತ್ತು ಅಧಿಕಾರಿಗಳು ಕೆಲ ಸಲಹೆಗಳನ್ನು ನೀಡಿದ್ದಾರೆ. ಸರ್ಕಾರ ನೀಡುತ್ತಿರುವ ಉಚಿತ ಚಿಕಿತ್ಸೆ ಮತ್ತು ಕೈಗೊಂಡಿರುವ ಕ್ರಮಗಳ ಬಗ್ಗೆ ಸೋಂಕಿನಿಂದ ಗುಣರಾದವರು ನೆರೆಹೊರೆಯವರ ಜತೆ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಆತಂಕ ನಿವಾರಿಸಬೇಕು ಎಂದು ಮನವಿ ಮಾಡಿದರು. ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ. ಸರ್ಕಾರದೊಂದಿಗೆ ಕ್ರೀಡೆ, ಸಿನಿಮಾ ತಾರೆಯರು, ಧಾರ್ವಿುಕ ಮುಖಂಡರು, ರಾಜಕೀಯ ನಾಯಕರು, ಕಲಾವಿದರು, ವಿಶೇಷ ವ್ಯಕ್ತಿಗಳ ಜತೆಗೂಡಿ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಿದ್ದೇವೆ ಎಂದರು.

ಕಳೆದೆರಡು ತಿಂಗಳಿಂದ ರಾಜ್ಯದಲ್ಲಿ ಕರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಎಷ್ಟೇ ಜಾಗೃತಿ ಮೂಡಿಸಿದರೂ ಸಾರ್ವಜನಿಕರು ಸರ್ಕಾರದ ಸೂಚನೆಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಈಗಿರುವ ಏಕೈಕ ಮಾರ್ಗವೆಂದರೆ ಕಠಿಣ ಕಾನೂನು ಜಾರಿಗೆ ತರುವುದು. | ಡಾ.ಕೆ.ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವhttps://www.vijayavani.net/chandamamas-vikram-bethala-famed-artist-shivashankaran-no-more/

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net