

ಬೆಂಗಳೂರು: ಪೊಲೀಸ್ ಸಿಬ್ಬಂದಿಗೆ ಕರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಇಲಾಖೆ ಎಚ್ಚೆತ್ತುಕೊಂಡಿದೆ. ಅಪರಾಧ ಪ್ರಕರಣದಲ್ಲಿ ಬಂಧಿಸುವ ಆರೋಪಿಗಳನ್ನು ನೇರವಾಗಿ ಠಾಣೆಗೆ ಕರೆತರದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುವುದು. ಅಲ್ಲಿ ನೆಗೆಟಿವ್ ವರದಿ ಬಂದರೆ ಮಾತ್ರ ಠಾಣೆ ಕರೆತರಲು ನಿರ್ಧರಿಸಲಾಗಿದೆ.
ಕರೊನಾ ಸೋಂಕು ದೃಢವಾದರೆ ಅಲ್ಲಿಯೇ ಚಿಕಿತ್ಸೆಗೆ ಕೊಡಿಸಲು ನಗರ ಪೊಲೀಸರು ಮುಂದಾಗಿದ್ದಾರೆ. ಅಪರಾಧ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಗೆ ಕರೊನಾ ಸೋಂಕು ದೃಢವಾದರೆ ಠಾಣೆಯ ಅಧಿಕಾರಿ/ಸಿಬ್ಬಂದಿ ವರ್ಗ ಕ್ವಾರಂಟೈನ್ಗೆ ಒಳಗಾಗುತ್ತಿದ್ದಾರೆ. 48 ಗಂಟೆ ಠಾಣೆಯನ್ನು ಸೀಲ್ಡೌನ್ ಮಾಡಲಾಗುತ್ತದೆ.
ಇದನ್ನೂ ಓದಿ: ಉದ್ವೇಗ ನಿಯಂತ್ರಿಸುವ ಯೋಗಾಭ್ಯಾಸ
ಇದೀಗ ಬೆಂಗಳೂರು ನಗರದಲ್ಲಿ ಜೀವನ್ಬಿಮಾನಗರ, ಜೆ.ಜೆ. ನಗರ, ಹೆಣ್ಣೂರು, ಜಯನಗರ, ಸೋಲದೇವನಹಳ್ಳಿ, ಸಿಟಿ ಮಾರ್ಕೆಟ್, ಬೈಯಪ್ಪನಹಳ್ಳಿ, ಶಂಕರಪುರ ಪೊಲೀಸ್ ಠಾಣೆಗಳನ್ನು ಸೀಲ್ಡೌನ್ ಮಾಡಲಾಗಿದೆ. 100ಕ್ಕೂ ಹೆಚ್ಚು ಸಿಬ್ಬಂದಿ ಕ್ವಾರಂಟೈನ್ನಲ್ಲಿದ್ದಾರೆ.