

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಬುಧವಾರ 35,693ಕ್ಕೆ ಇಳಿಕೆಯಾಗಿದೆ.
ಅಕ್ಟೋಬರ್ ಎರಡನೇ ವಾರದಿಂದಲೂ ಕರೊನಾ ಸೋಂಕಿತ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆಯೇ ಅಧಿಕವಾಗಿ ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣದಲ್ಲಿ ಭಾರೀ ಪ್ರಮಾಣದ ಇಳಿಕೆಯಾಗಿದೆ. 8,045 ಮಂದಿ ಸೋಂಕು ಮುಕ್ತರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 7,88,780ಕ್ಕೆ ಮುಟ್ಟಿದೆ.
ಇನ್ನು 3,377 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 8,35,773ಕ್ಕೆ ತಲುಪಿದೆ. ಮತ್ತೊಂದೆಡೆ ಸೋಂಕಿನಿಂದ 34 ಮಂದಿ ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 11,281ಕ್ಕೆ ಏರಿಕೆಯಾಗಿದೆ. ಗಂಭೀರ ಸ್ಥಿತಿಯಲ್ಲಿರುವ 932 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.