

ಬೆಂಗಳೂರು: ಕಳೆದ 3-4 ದಿನಗಳಿಂದ ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಮಾಣ ತಗ್ಗಿದ್ದು, ಮಂಗಳವಾರ 53 ಹೊಸ ಪ್ರಕರಣ ದೃಢಪಟ್ಟಿವೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 324 ತಲುಪಿದೆ. ಕಳೆದ 24 ಗಂಟೆಗಳಲ್ಲಿ 610 ಆರ್‌ಟಿಪಿಸಿಆರ್ ಸೇರಿ 675 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ. ಇದರೊಂದಿಗೆ ಸೋಂಕು ಪ್ರಕರಣಗಳ ವರದಿ ಪ್ರಮಾಣ ಶೇ. 7.8 ವರದಿಯಾಗಿದೆ. ಸಕ್ರಿಯ ಪ್ರಕರಣಗಳ ಪೈಕಿ 319 ಮಂದಿ ಮನೆ ಆರೈಕೆಯಲ್ಲಿದ್ದಾರೆ. ಉಳಿದ 5 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೂ ನಾಲ್ವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.