

ಕುಂದಾಪುರ: ಮಾಜಿ ಶಾಸಕ ದಿ. ಕಾಪು ಸಂಜೀವ ಶೆಟ್ಟಿ ಪುತ್ರ, ಕುಂದಾಪುರ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ, ದೀರ್ಘ ಕಾಲ ಕುಂದಾಪುರ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಪ್ರಗತಿಪರ ಕೃಷಿಕ ಕಾಪು ದಿನಕರ ಶೆಟ್ಟಿ ಕಾಳಾವರ (68) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.
ಅವರು ಕೋವಿಡ್ ಸೋಂಕಿಗೊಳಗಾಗಿ ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ದಿನಕರ ಶೆಟ್ಟಿ ರಾಜ್ಯ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರಾಗಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. ರಾಜ್ಯ ಕಾಂಗ್ರೆಸ್ ಸಮಿತಿ ಸದಸ್ಯರಾಗಿ ಪ್ರಸಕ್ತ ಕುಂದಾಪುರ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರಾಗಿದ್ದರು. ಇತ್ತೀಚೆಗೆ ಸಕ್ರಿಯ ರಾಜಕೀಯದಿಂದ ದೂರವಿದ್ದರು.