ಕಿಟ್ ಪಡೆಯಲು ಜನಸ್ತೋಮ, ಅಂತರ ಮರೆತು ಸೇರಿದ ಕಾರ್ಮಿಕರು

kit new
Published on

ಉಡುಪಿ: ಉಡುಪಿ ಕಲ್ಸಂಕ ಸಮೀಪ ರಾಯಲ್ ಗಾರ್ಡನ್ ಸಮೀಪ ಜರಗಿದ ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಮರೆತು ನೂರಾರು ಮಂದಿ ಕಾರ್ಮಿಕರು ಸೇರಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಣ ಕಾರ್ಮಿಕರ ಕಲ್ಯಾಣ ಕಲ್ಯಾಣ ಮಂಡಳಿ ವತಿಯಿಂದ ಕೋವಿಡ್-19 ಸಂಕಷ್ಟದಲ್ಲಿರುವ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸೋಮವಾರ ಕಿಟ್ ವಿತರಿಸಲಾಗಿದೆ. ಉದ್ದೇಶ ಒಳ್ಳೆಯದಾಗಿದ್ದರೂ ಸರಿಯಾದ ರೀತಿಯಲ್ಲಿ ಕಾರ್ಯಕ್ರಮ ನಡೆಸಿಲ್ಲ. ಸೀಮಿತ ಕಾರ್ಮಿಕರನ್ನು ಒಳಗೊಂಡು ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸುವ ಬದಲು ಜಾತ್ರೆ ನಡೆಸಿದ ರೀತಿಯಲ್ಲಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಸಾರ್ವಜನಿಕ ವಲಯ ಆಕ್ರೋಶ ವ್ಯಕ್ತಪಡಿಸಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳದಲ್ಲಿದ್ದರೂ ಯಾವುದೆ ಮುಂಜಾಗ್ರತೆ ಅಥವ ಕ್ರಮ ಕೈಗೊಳ್ಳಲು ಮುಂದಾಗದಿರುವ ಬಗ್ಗೆ ಜನತೆ ಬೇಸರ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net