ಉಡುಪಿಯಲ್ಲಿ ಕೋವಿಡ್ ಲ್ಯಾಬ್ ಶೀಘ್ರ ಕಾರ್ಯ ಆರಂಭ

Nation-11 corona
Published on

ಕುಂದಾಪುರ: ಗಂಟಲು ದ್ರವ ಪರೀಕ್ಷೆಗಾಗಿ ಎಲ್ಲ ಜಿಲ್ಲೆಗಳಲ್ಲಿಯೂ ಕೋವಿಡ್ ಲ್ಯಾಬ್ ತೆರೆಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಉಡುಪಿಯಲ್ಲಿ ನಾಲ್ಕೈದು ದಿನಗಳಲ್ಲಿ ಲ್ಯಾಬ್ ಕಾರ್ಯಾರಂಭಿಸಲಿದೆ ಎಂದು ಮುಜರಾಯಿ ಹಾಗೂ ಮೀನುಗಾರಿಕಾ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಪುರಸಭೆ ಕಚೇರಿಯಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ಹಾಗೂ ಪರಿಣಿತರು ಸೋಂಕು ಪ್ರಮಾಣ ಹೆಚ್ಚಾದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ನೀಡುತ್ತಿದ್ದು, ಸರ್ಕಾರ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಸೌಲಭ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುತ್ತಿದೆ ಎಂದರು.

ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ನೀಡಿದ್ದ ಪರಿಹಾರದ ಪ್ಯಾಕೇಜ್ ಪಡೆಯಲು ಆಟೋ ಚಾಲಕರು ಕಡ್ಡಾಯವಾಗಿ ಬ್ಯಾಡ್ಜ್ ಹೊಂದಿರಬೇಕು ಎನ್ನುವ ನಿಯಮಾವಳಿಯಲ್ಲಿ ಬದಲಾವಣೆ ಮಾಡಲಾಗಿದೆ. ಬ್ಯಾಡ್ಜ್ ಇಲ್ಲದ ಚಾಲಕರಿಗೂ ಪ್ಯಾಕೇಜ್ ಸಿಗಲಿದೆ. ಕೆಲ ತಾಂತ್ರಿಕ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net