

ಹಾವೇರಿ: ಜಿಲ್ಲೆಯಲ್ಲಿ ಗುರುವಾರ ಆರೋಗ್ಯ ಇಲಾಖೆಯ ಆರು ಸಿಬ್ಬಂದಿ ಸೇರಿ 64 ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ. 35 ಜನರು ಗುಣವಾಗಿ ಬಿಡುಗಡೆಗೊಂಡಿದ್ದಾರೆ.
ಹಾವೇರಿ ಹಾಗೂ ಶಿಗ್ಗಾಂವಿ ತಾಲೂಕಿನಲ್ಲಿ ತಲಾ 25, ರಾಣೆಬೆನ್ನೂರ 5, ಸವಣೂರ ಹಾಗೂ ಬ್ಯಾಡಗಿ ತಾಲೂಕಿನಲ್ಲಿ ತಲಾ 4, ಹಿರೇಕೆರೂರ ತಾಲೂಕಿನಲ್ಲಿ ಒಬ್ಬರಿಗೆ ಸೇರಿ ಒಟ್ಟು 64 ಜನರಿಗೆ ಸೋಂಕು ದೃಢಪಟ್ಟಿದೆ. ಹಿರೇಕೆರೂರ ತಾಲೂಕಿನಲ್ಲಿ 12, ರಾಣೆಬೆನ್ನೂರ 9, ಹಾವೇರಿ 7, ಹಾನಗಲ್ಲ 4, ಬ್ಯಾಡಗಿ ತಾಲೂಕಿನಲ್ಲಿ ಇಬ್ಬರು ಸವಣೂರ ತಾಲೂಕಿನಲ್ಲಿ ಒಬ್ಬರು ಸೇರಿ ಒಟ್ಟು 35 ಜನರು ಗುಣವಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 22,551 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. 21,667 ಜನರು ಸೋಂಕಿನಿಂದ ಗುಣವಾಗಿ ಬಿಡುಗಡೆ ಹೊಂದಿದ್ದಾರೆ. 650 ಜನರು ಕೋವಿಡ್ನಿಂದ ಮೃತಪಟ್ಟಿದ್ದು, 234 ಸಕ್ರಿಯ ಪ್ರಕರಣಗಳಿವೆ. ಅದರಲ್ಲಿ 183 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. 51 ಜನರು ಹೋಮ್ ಐಸೋಲೇಷನ್ನಲ್ಲಿದ್ದಾರೆ ಎಂದು ಡಿಎಚ್ಒ ಡಾ. ಎಚ್.ಎಸ್. ರಾಘವೇಂದ್ರಸ್ವಾಮಿ ತಿಳಿಸಿದ್ದಾರೆ.