ಹೋಂ ಐಸೋಲೇಶನ್‌ ಕಡಿಮೆ ಮಾಡಿ; ಸಿಎಂ ಬೊಮ್ಮಾಯಿ ಸೂಚನೆ

bommayi
Published on

ಮಂಗಳೂರು: ಕೋವಿಡ್‌-19 ಸೋಂಕಿತರ ಪ್ರಮಾಣ ಕಡಿಮೆ ಮಾಡುವ ನಿಟ್ಟಿನಲ್ಲಿ ಹೋಂ ಐಸೋಲೇಷನ್ ಬದಲು ಪಾಸಿಟಿವ್ ಬಂದವರನ್ನು ಕೋವಿಡ್ ಕೇರ್ ಕೇಂದ್ರಕ್ಕೆ ವರ್ಗಾಯಿಸುವಂತೆ ಕಟ್ಟು ನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗುರುವಾರ ಮಂಗಳೂರಿನಲ್ಲಿ ಮಾತನಾಡಿದ ಅವರು, ಸದ್ಯ ಶೇ.80ರಷ್ಟು ಕೋವಿಡ್ ಬಾಧಿತರು ಹೋಂ ಐಸೊಲೇಶನ್‌ನಲ್ಲಿದ್ದಾರೆ. ಇದರಿಂದ ಸೋಂಕು ಹರಡುವ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ಇದು ರಿವರ್ಸ್ ಆಗಬೇಕಿದೆ ಎಂದವರು ತಿಳಿಸಿದ್ದಾರೆ. ಸಿಎಂ ಜತೆಗಿದ್ದ ಆರೋಗ್ಯ ಸಚಿವ ಡಾ.ಸುಧಾಕರ ಅವರೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net