

ಧಾರವಾಡ: ಭಾರತ ಸರ್ಕಾರದ ಮಾರ್ಗಸೂಚಿಯಂತೆ ಕಾರ್ಬಿವ್ಯಾಕ್ಸ್ ಲಸಿಕೆಯನ್ನು (ಹೆಟಿರೊಲಾಗಸ್) ಮುನ್ನೆಚ್ಚರಿಕೆ ಡೋಸ್ ಆಗಿ ನೀಡಬಹುದಾಗಿದೆ. ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ ೨ನೇ ಡೋಸ್ ಪಡೆದು 6 ತಿಂಗಳು ಅಥವಾ 26 ವಾರ ಪೂರೈಸಿದ 18 ವರ್ಷ ಮೇಲ್ಪಟ್ಟವರು, ಮುನ್ನೆಚ್ಚರಿಕೆ ಡೋಸ್ ಪಡೆಯದ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಇರುವವರು ಮತ್ತು ಆರೋಗ್ಯ ಕಾರ್ಯಕರ್ತರು ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು.
ಧಾರವಾಡದ ಜಿಲ್ಲಾ ಆಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಮತ್ತು ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ತಾಲೂಕು ಆಸ್ಪತ್ರೆಗಳಲ್ಲಿ ಕಾರ್ಬಿವ್ಯಾಕ್ಸ್ ಲಸಿಕೆ ಲಭ್ಯ ಇದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಽಕಾರಿ ಡಾ. ಶಶಿ ಪಾಟೀಲ ತಿಳಿಸಿದ್ದಾರೆ.