ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಮಾಣ ದರ ಶೇ. 4.5 ವರದಿ

Covid
Published on

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 619 ಗಂಟಲು ದ್ರಮ ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, 28 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಸೋಂಕು ಪ್ರಮಾಣ ದರ ಶೇ. 4.5 ವರದಿಯಾಗಿದೆ.

ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 467 ತಲುಪಿದೆ. ಈ ಪೈಕಿ 463 ಮಂದಿ ಮನೆ ಆರೈಕೆಯಲ್ಲಿದ್ದು, 4 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಜನವರಿಯಿಂದ ಈವರೆಗೂ 1,315 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, 847 ಮಂದಿ ಗುಣ ಹೊಂದಿದ್ದಾರೆ. ಸೋಂಕಿನಿಂದ ಈವರೆಗೂ ಯಾವುದೇ ಸಾವು ಸಂಭವಿಸಿಲ್ಲ. ವರದಿಯಾಗಿದ್ದ 11 ಮೃತರ ಪೈಕಿ 10 ಮಂದಿಯ ಡೆತ್ ಆಡಿಟ್ ವರದಿ ಬಂದಿದ್ದು, ಸಾವಿಗೆ ಕೋವಿಡ್ ಕಾರಣವಲ್ಲ ಎಂದು ತಿಳಿಸಿರುವುದಾಗಿ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net