ಕೋವಿಡ್ ಅಕ್ರಮ ವರದಿ ಆಧರಿಸಿ ಕ್ರಮ : ಸಚಿವ ದಿನೇಶ್ ಗುಂಡೂರಾವ್

Dinesh Gundurao
Published on

ಬೆಂಗಳೂರು: ಕೋವಿಡ್ ಅಕ್ರಮ ಕುರಿತಂತೆ ನಿವೃತ್ತ ನ್ಯಾಯಮೂರ್ತಿ ಕುನ್ನಾ ಅವರು ಮುಖ್ಯಮಂತ್ರಿಗಳಿಗೆ ವರದಿ ನೀಡಿದ್ದು, ಅದರಲ್ಲಿನ ಅಂಶಗಳನ್ನ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವರದಿಯಲ್ಲಿ ಏನಿದೆ ಎಂಬುದು ನಮಗೆ ತಿಳಿದಿಲ್ಲ. ಆದರೆ ಸಂಸದ ಸುಧಾಕರ್ ಅವರು ಮಾತ್ರ ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಬಹುಷಃ ಕೋವಿಡ್ ಸಂದರ್ಭದಲ್ಲಿ ಅವರು ಮಾಡಿರುವ ತಪ್ಪುಗಳು ಅವರನ್ನು ಕಾಡುತ್ತಿರಬಹುದು ಎಂದು ಜರಿದರು.

ಈ ಕುರಿತು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತಜ್ಞರ ಸಮಿತಿ ಕೋವಿಡ್ ಅಕ್ರಮದ ಬಗ್ಗೆ ವರದಿ ಸಲ್ಲಿಕೆ ಮಾಡಿದೆ. ವರದಿಯಲ್ಲಿ ಇಂಥವರ ಹೆಸರು ಇದೆ ಎಂದು ನಾವು ಎಲ್ಲಿಯೂ ಹೇಳಿಲ್ಲ. ಆದರೆ ಸುಧಾಕರ್ ಅವರೇ ತಮ್ಮ ಬಗ್ಗೆ ತಾವು ಆರೋಪ ಮಾಡಿಕೊಳ್ಳುತ್ತಿದ್ದಾರೆ ಎಂದರು.

ಬೀದಿಲಿ ನಿಂತಕೊಂಡು ಕೆಲಸ ಮಾಡಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರು ಎಲ್ಲಿ ನಿಂತು ಕೆಲಸ ಮಾಡಿದ್ದಾರೆ ಎಂಬುದನ್ನು ನಾವು ನೋಡಿದ್ದೇವೆ. ಮಂತ್ರಿ ಮಾಡುವದೇ ಕೆಲಸ ಮಾಡಲಿ ಎಂದು. ಹಾಗಿದ್ದಾಗ ಕೆಲಸ ಮಾಡುವುದು ಮಂತ್ರಿಗಳ ಕರ್ತವ್ಯ. ಅದನ್ನ ನಾವು ಹೇಳಿಕೊಳ್ಳುವುದಲ್ಲ. ಜನರು ನಮ್ಮ ಕೆಲಸದ ಬಗ್ಗೆ ಮಾತಾಡಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net