ಇಷ್ಟಾದರೂ ಈ ಜನರಿಗೆ ಬುದ್ಧಿ ಬರಲಿಲ್ಲವಲ್ಲಾ?!

Basava Kalyana Bidar Masjid Photo 5 MAY 20
Published on

ಬಸವಕಲ್ಯಾಣ (ಬೀದರ್): ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ 8 ಜನರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ನಿಲ್ದಾಣ ಸಮೀಪದ ಮಸೀದಿಯೊಂದರಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ತಹಸೀಲ್ದಾರ್ ಸಾವಿತ್ರಿ ಸಲಗರ, ಪೌರಾಯುಕ್ತೆ ಮೀನಾಕುಮಾರಿ ಬೋರಾಳಕರ್, ಸಿಪಿಐ ಮಲ್ಲಿಕಾರ್ಜುನ ಯಾತನೂರ, ಪಿಎಸ್‌ಐ ಸುನೀಲಕುಮಾರ ನೇತೃತ್ವದ ತಂಡ ಭೇಟಿ ನೀಡಿದಾಗ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿರುವುದು ಕಂಡಿದೆ.

ಕರೊನಾ ಭೀತಿ ಹಿನ್ನೆಲೆಯಲ್ಲಿ ಮಂದಿರ, ಮಸೀದಿ, ಚರ್ಚ್‌ಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿಷೇಧವಿದೆ. ಆದರೂ ಇಲ್ಲಿ 20ಕ್ಕೂ ಹೆಚ್ಚು ಜನ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದರು. ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಕೆಲವರು ಓಡಿಹೋದರೆ, ಉಳಿದವರು ಅಧಿಕಾರಿಗಳ ಜತೆ ವಾದಕ್ಕಿಳಿದರು. ಕೊನೆಗೆ ಅಧಿಕಾರಿಗಳು ಅವರಿಗೆಲ್ಲ ತಿಳಿಹೇಳಿ, ಸುಮ್ಮನಾಗಿಸಿದರು. ನಂತರ ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net