ಚಿಕಿತ್ಸೆಗೆ ಸ್ಪಂದಿಸದೆ ಹಸು ಸಾವು

IMG-20240406-WA0295
ಕೆಂಚಮ್ಮನ ಹೊಸಕೋಟೆ ಹೋಬಳಿಯ ಶಿರಗಾವರ ಗ್ರಾಮದ ವೆಂಕಟೇಶ್ ಎಂಬುವವರ ಹಸು ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿರುವುದು.
Published on

ಆಲೂರು: ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಎಂಟು ತಿಂಗಳ ತೆನೆ ಹಸು ಶನಿವಾರ ಮೃತಪಟ್ಟಿದೆ.

ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿ ಶಿರಗಾವರ ಗ್ರಾಮದ ವೆಂಕಟೇಶ್ ಅವರ ಹಸು ಇದಾಗಿದೆ. ಕಳೆದ ಒಂದು ವಾರದ ಹಿಂದೆ ಮನೆಯ ಮುಂಭಾಗದಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ಕಾಡಾನೆ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿತ್ತು. ನಂತರ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪಶು ವೈದ್ಯರಿಂದ ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ಹಸುವಿನ ಆರೋಗ್ಯದಲ್ಲಿ ಚೇತರಿಕೆ ಕಾಣದೆ ಮೃತಪಟ್ಟಿದೆ.

ತಾಲೂಕು ವಲಯ ಅರಣ್ಯಾಧಿಕಾರಿ ಯತೀಶ್, ಪಶು ವೈದ್ಯಾಧಿಕಾರಿ ಅನಿಲ್, ಉಪವಲಯ ಅರಣ್ಯ ಸಂರಕ್ಷಣಾಧಿಕಾರಿ ಪ್ರದೀಪ್ ಕುಮಾರ್, ಗಸ್ತು ಅರಣ್ಯ ಪಾಲಕರಾದ ಜೈಪಾಲ್, ಕರವೇ ಯುವ ಘಟಕದ ಅಧ್ಯಕ್ಷ ತನುಗೌಡ, ಜಿಲ್ಲಾ ಎಪಿಎಂಸಿ ಮಾಜಿ ಅಧ್ಯಕ್ಷ ಕೆ. ಎಸ್.ಮಂಜೇಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net