

ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಮೂಡಲಕೊಪ್ಪಲು ಗ್ರಾಮದಲ್ಲಿ ಶನಿವಾರ ಚಿರತೆ ದಾಳಿಗೆ ಹಸು ಬಲಿಯಾಗಿದೆ. ಗ್ರಾಮದ ಪ್ರಕಾಶ್ ಅವರು ಹಸುವನ್ನು ತಮ್ಮ ಜಮೀನಿನ ಕೊಟ್ಟಿಗೆಯ ಬಳಿ ಕಟ್ಟಿಹಾಕಿದರು. ಈ ವ್ಯಾಪ್ತಿಯಲ್ಲಿ ಬೀಡುಬಿಟ್ಟಿರುವ ಚಿರತೆಯೂ ಮುಂಜಾನೆ 4 ಗಂಟೆ ಸುಮಾರಿಗೆ ದಾಳಿ ಮಾಡಿ ಬಲಿ ತೆಗೆದುಕೊಂಡಿದೆ. ಹೈನುಗಾರಿಕೆ ಹಾಗೂ ಕೃಷಿಯನ್ನು ನಂಬಿ ಜೀವನ ನಡೆಸುತ್ತಿದ್ದು, ಹಸು ಮೃತಪಟ್ಟಿರುವುದರಿಂದ ಸಾಕಷ್ಟು ನಷ್ಟ ಉಂಟಾಗಿದೆ. ಸಂಬಂಧಪಟ್ಟ ಇಲಾಖೆಯೂ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರಕಾಶ್ ಅಳಲು ತೋಡಿಕೊಂಡಿದ್ದಾರೆ.