ಸಿಂಡೇನಹಳ್ಳಿಯಲ್ಲಿ ಹುಲಿ ದಾಳಿಗೆ ಹಸು ಬಲಿ

tiger
Published on

ಹನಗೋಡು: ಹೋಬಳಿ ವ್ಯಾಪ್ತಿಯಲ್ಲಿ ಮತ್ತೆ ಹುಲಿ ಉಪಟಳ ಮುಂದುವರಿದಿದ್ದು, ಸೋಮವಾರ ಹಾಡಹಗಲೇ ಮೇಯುತ್ತಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿದೆ.

ಹನಗೋಡು ಹೋಬಳಿಯ ಸಿಂಡೇನಹಳ್ಳಿ ಗ್ರಾಮದ ಈಶ್ವರೇಗೌಡ ಸೋಮವಾರ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಶೆಟ್ಟಹಳ್ಳಿಯ ಕಾಡಂಚಿನಲ್ಲಿರುವ ತಮ್ಮ ಜಮೀನಿನಲ್ಲಿ ಹಸುವನ್ನು ಮೇಯಲು ಬಿಟ್ಟಿದ್ದರು. ಈ ವೇಳೆ ಹುಲಿ ದಾಳಿ ನಡೆಸಿ ಹಸುವನ್ನು ಕೊಂದುಹಾಕಿದೆ. ಹುಲಿಯನ್ನು ಕಂಡ ರೈತ ಈಶ್ವರೇಗೌಡ ಜೋರಾಗಿ ಕಿರುಚಿಕೊಂಡಿದ್ದರಿಂದ ಹುಲಿ ಪಕ್ಕದ ಕಾಡಿನತ್ತ ನುಗ್ಗಿ ಪರಾರಿಯಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ನಾಲ್ಕು ದಿನಗಳ ಹಿಂದೆಯಷ್ಟೇ ಮುತ್ತುರಾಯನಹೊಸಹಳ್ಳಿ ಗ್ರಾಮದಲ್ಲಿ ಹುಲಿ ಜಾನುವಾರಗಳ ಮೇಲೆ ದಾಳಿ ನಡೆಸಿತ್ತು. ಈಗ ಮತ್ತೆ ಕಾಣಿಸಿಕೊಂಡಿರುವುದು ಕಾಡಂಚಿನ ಗ್ರಾಮಗಳ ಜನರನ್ನು ಆತಂಕ್ಕೀಡು ಮಾಡಿದೆ.

ಹುಲಿ ಸೆರೆಗೆ ಆಗ್ರಹ: ಈ ಭಾಗದಲ್ಲಿ ಹುಲಿ,ಚಿರತೆ ಕಾಟ ವಿರೀತವಾಗಿದ್ದು, ರೈತರು ತಮ್ಮ ಜಮೀನುಗಳಿಗೆ ತೆರಳಲು ಹೆದರುತ್ತಿದ್ದಾರೆ. ಅರಣ್ಯ ಇಲಾಖೆಯವರ ನಿರ್ಲಕ್ಷ್ಯ ದಿಂದ ಸುತ್ತಮುತ್ತಲ ಗ್ರಾಮಗಳಲ್ಲಿ ಹುಲಿ ಚಿರತೆಗಳ ಉಪಟಳ ಮುಂದುವರಿದಿದ್ದು, ಕೂಡಲೇ ಹುಲಿ ಸೆರೆ ಹಿಡಿಯಬೇಕೆಂದು ರೈತರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net