ಗೋ ಹತ್ಯೆ, ಮಾಲೀಕರ ಜಮೀನಿನಲ್ಲೇ ವಿಕೃತಿ

New Project (22)
Published on

ಉಪ್ಪಿನಂಗಡಿ: ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿನ ದೇಜಪ್ಪ ಮೂಲ್ಯ ಎಂಬುವರ ದನದ ಹಟ್ಟಿಯಿಂದ ಗಬ್ಬದ ದನವನ್ನು ಕದ್ದೊಯ್ದ ಹಂತಕರು ಅವರ ಜಮೀನಿನಲ್ಲಿಯೇ ಹತ್ಯೆ ಮಾಡಿ ಮಾಂಸವನ್ನು ಸಾಗಿಸಿರುವುದು ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಗೀತೇಶ್ ಕೆ. ಎಂಬುವರು ಪೊಲೀಸರಿಗೆ ದೂರು ನೀಡಿದ್ದು, ತನ್ನ ಮನೆಯ ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಹಸು ಗುರುವಾರ ನಸುಕಿನ 2.30ರ ವೇಳೆ ಹಟ್ಟಿಯಲ್ಲಿಯೇ ಇರುವುದನ್ನು ಕಂಡಿದ್ದು, ಮುಂಜಾನೆ 6.30ರ ಸಮಯಕ್ಕೆ ಹಟ್ಟಿಗೆ ಹೋದಾಗ ದನ ನಾಪತ್ತೆಯಾಗಿತ್ತು. ಹುಡುಕಾಟ ನಡೆಸಿದಾಗ ತಮ್ಮ ಜಮೀನಿನಲ್ಲಿಯೇ ಹಸುವಿನ ಚರ್ಮ ಮತ್ತದರ ಅಂಗಾಂಗಗಳು ಪತ್ತೆಯಾಗಿದೆ. ಅಪರಿಚಿತ ಹಂತಕರು ಕೃತ್ಯ ಎಸಗಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net