ಗಂಗೊಳ್ಳಿಯಲ್ಲಿ ಗೋ ಕಳವು ಹೆಚ್ಚಳ

CATTLE NEW
Published on

ಗಂಗೊಳ್ಳಿ: ಗಂಗೊಳ್ಳಿ ಸುತ್ತಮುತ್ತ ರಾತ್ರಿ ವೇಳೆ ದನಗಳ ಕಳ್ಳತನ ಹೆಚ್ಚಾಗುತ್ತಿದ್ದು, ಪೊಲೀಸರಿಗೆ ಈ ಬಗ್ಗೆ ವಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹಿಂದುಪರ ಸಂಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಗಂಗೊಳ್ಳಿ ಮೆಸ್ಕಾಂ ಶಾಖೆ ಎದುರು ಮಲಗಿದ್ದ ದನವನ್ನು ರಾತ್ರಿ ವೇಳೆ ಕಳವು ವಾಡಲಾಗಿದೆ. ಪ್ರತ್ಯಕ್ಷದರ್ಶಿಯೊಬ್ಬರು ಈ ಬಗ್ಗೆ ಗಂಗೊಳ್ಳಿ ಪೊಲೀಸರಿಗೆ ವಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಗಂಗೊಳ್ಳಿಯ ಬಂದರು, ರಥಬೀದಿ, ವ್ಯಾಂಗನೀಸ್ ರಸ್ತೆ, ಕಾಲೇಜು ಮೈದಾನ, ಬಾವಿಕಟ್ಟೆ ಮೊದಲಾದ ಕಡೆಗಳಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅನೇಕ ದನಗಳನ್ನು ರಾತ್ರೋ ರಾತ್ರಿ ಕಳವು ವಾಡಲಾಗಿದೆ. ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರವೇ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ನಡೆಸುವುದಾಗಿ ಹಿಂದು ಜಾಗರಣ ವೇದಿಕೆ ಮುಖಂಡ ನವೀನ್ ಗಂಗೊಳ್ಳಿ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net