ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ 145ನೇ ವಾರ್ಷಿಕ ಮಹಾಸಭೆ

cpa
Published on

ಮಡಿಕೇರಿ:

ಹೋಬಳಿ ಮಟ್ಟದಲ್ಲಿ ಸಮುದಾಯ ಕೃಷಿಕ ಗುಂಪುಗಳನ್ನು ಪ್ರಾರಂಭಿಸುವ ಮೂಲಕ ಆಯಾ ವಲಯಗಳಲ್ಲಿರುವ ಕಾಫಿ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದು ಗುಣಮಟ್ಟ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ವಿನೂತನ ಯೋಜನೆ ಭಾರತೀಯ ಕಾಫಿ ಮಂಡಳಿ ಮುಂದಿದೆ ಎಂದು ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾರ್ಯದರ್ಶಿ ಡಾ. ಕೆ. ಜಿ. ಜಗದೀಶ್ ಹೇಳಿದರು. ಮಡಿಕೇರಿಯಲ್ಲಿ ಸೋಮವಾರ ನಡೆದ ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ 145ನೇ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.

ಕಾಫಿ ಬೆಳೆಯ ಗುಣಮಟ್ಟಕ್ಕೆ ಆದ್ಯತೆ ನೀಡಿದಾಗ ಭಾರತೀಯ ಕಾಫಿ ಬೆಳೆಗೆ ಎಂದಿಗೂ ಹಿನ್ನಡೆಯಾಗಲಾರದು. ಈ ನಿಟ್ಟಿನಲ್ಲಿ ಕಾಫಿ ಬೆಳೆಯ ಗುಣಮಟ್ಟ ಕಾಪಾಡುವ ದೃಷ್ಟಿಯಿಂದ ಪ್ರತಿ ಹೋಬಳಿಯಲ್ಲಿಯೂ 100 ಕೃಷಿಕರನ್ನೊಳಗೊಂಡ ಸಮುದಾಯ ಗುಂಪನ್ನು ಪ್ರಾರಂಭಿಸಿ, ಅವರು ಬೆಳೆದ ಕಾಫಿಯನ್ನು ಸಂಗ್ರಹಿಸಿ ಅದರ ಗುಣಮಟ್ಟದ ಬಗ್ಗೆ (ಕಾಫಿ ಕಪ್ಪಿಂಗ್ ಸ್ಕೋರ್) ಪ್ರಯೋಗಾಲಯದಿಂದ ಮಾಹಿತಿ ಪಡೆಯಲಾಗುತ್ತದೆ. ಗುಣಮಟ್ಟ ಹೆಚ್ಚಳವಾಗಬೇಕೆಂದಾದಲ್ಲಿ ಯಾವ ರೀತಿ ಗುಣಮಟ್ಟ ಹೆಚ್ಚಳ ಮಾಡಬಹುದು ಎಂಬ ಬಗ್ಗೆಯೂ ಕಾಫಿ ಮಂಡಳಿಯಿAದ ಸೂಕ್ತ ಮಾಹಿತಿಯನ್ನು ತಜ್ಞರು ಕೃಷಿಕರಿಗೆ ನೀಡಲಿದ್ದಾರೆ. ಈ ಯೋಜನೆಯಿಂದ ಪ್ರತಿ ಗ್ರಾಮದ ಕಾಫಿ ಕೃಷಿಕರಿಗೆ ಕಾಫಿಯ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗಿ ಉತ್ತಮ ಬೆಲೆಯನ್ನು ಅಂತರರಾಷ್ಟಿçÃಯ ಮಾರುಕಟ್ಟೆಯಲ್ಲಿ ಪಡೆಯಲು ಸಾಧ್ಯವಾಗಲಿದೆ.

ಭಾರತೀಯ ಕಾಫಿ ಮಂಡಳಿಯಿAದ ಶೀಘ್ರದಲ್ಲಿಯೇ 2 ವರ್ಷಗಳ ಡಿಪ್ಲೋಮ ಪದವಿ ನೀಡಲಾಗುತ್ತದೆ. ಇದರಿಂದಾಗಿ ಯುವಪೀಳಿಗೆ ಕಾಫಿ ಕೃಷಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ. ತೋಟ ನಿರ್ವಹಣೆಗೆ ಸೂಕ್ತ ತರಬೇತಿ ಹೊಂದಿದವರ ಕೊರತೆಯನ್ನು ಗಮನಿಸಿ ಕಾಫಿ ಮಂಡಳಿಯು ತೋಟಗಳ ಸೂಪರ್ ವೈಸರ್‌ಗಳು ಮತ್ತು ವ್ಯವಸ್ಥಾಪಕರಾಗಿ ತರಬೇತಿ ನೀಡುವ ಯೋಜನೆ ಪ್ರಾರಂಭಿಸಲಿದೆ. 10ನೇ ತರಗತಿ ಉತ್ತೀರ್ಣರಾದವರು ಈ ತರಬೇತಿಯನ್ನು ಪಡೆಯುವ ಮೂಲಕ ಕಾಫಿ ತೋಟಗಳಲ್ಲಿ ಉದ್ಯೋಗ ಪಡೆಯಲು ಸಾಧ್ಯವಾಗಲಿದೆ.

ಹೆಚ್ಚುತ್ತಿರುವ ಕಾಫಿ ಕೆಫೆಗಳಿಗೆ ಸೂಕ್ತ ಸಿಬ್ಬಂದಿ ಅಗತ್ಯತೆಯನ್ನು ಮನಗಂಡು ಮಹಿಳೆಯರು, ಮಕ್ಕಳೂ ಸೇರಿದಂತೆ ಆಸಕ್ತಿಯುಳ್ಳವರಿಗೆ ಕೆಫೆ ಬರಿಸ್ಟಾ (ಕೆಫೆ ನಿರ್ವಾಹಕರು) ತರಬೇತಿ ನೀಡುವ ಯೋಜನೆ ಮಂಡಳಿಯ ಮುಂದಿದೆ. ಈ ಮೂಲಕ ಕಾಫಿ ತೋಟಗಳಿಗೆ ಬರುವ ಸಂದರ್ಶಕರು, ಪ್ರವಾಸಿಗರಿಗೂ ಉತ್ತಮ ಗುಣಮಟ್ಟದ ಸ್ವಾದಿಷ್ಟ ಕಾಫಿ ತಯಾರಿಸಿ ನೀಡಬಹುದಾಗಿದೆ.

ಕೊಡಗಿನಲ್ಲಿ ಪರಿಸರ ಸ್ನೇಹಿ ಕಾಫಿ ಪ್ರವಾಸೋದ್ಯಮದ ಮೂಲಕ ಕಾಫಿ ತೋಟಗಳಿಗೆ ಸಂದರ್ಶಕರನ್ನು ಕರೆತರಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಕಾಫಿ ತೋಟಗಳನ್ನು ಪರಿಸರ ಸ್ನೇಹಿಯಾಗಿ ಸಂರಕ್ಷಿಸಿಕೊಳ್ಳುವ ಹೊಣೆಗಾರಿಕೆ ತೋಟ ಮಾಲೀಕರ ಮೇಲಿದೆ. ಕೊಡಗೂ ಸೇರಿದಂತೆ ಕರ್ನಾಟಕದ ಕಾಫಿ ತೋಟಗಳಲ್ಲಿ ಹಲವಷ್ಟು ಜೀವವೈವಿಧ್ಯತೆಗಳಿವೆ. ಇದನ್ನೇ ಬಳಸಿಕೊಂಡು ಜಾಗತಿಕ ಮಟ್ಟದಲ್ಲಿ ಕರ್ನಾಟಕದ ಕಾಫಿ ತೋಟಗಳಲ್ಲಿನ ವಿಶಿಷ್ಟತೆಗಳ ಕಥೆ ಹೇಳುವಂತಾಗಬೇಕು.

ಭವಿಷ್ಯದಲ್ಲಿ ಕಾರ್ಮಿಕರ ಸಮಸ್ಯೆ ಮತ್ತಷ್ಟು ಬಿಗಡಾಯಿಸುವ ಹಿನ್ನೆಲೆಯಲ್ಲಿ ಶೇ. 60ರಷ್ಟು ತೋಟವನ್ನಾದರೂ ಯಾಂತ್ರೀಕರಣಕ್ಕೆ ಒಳಪಡಿಸುವ ಅನಿವಾರ್ಯತೆ ಕಾಫಿ ಕೃಷಿಕರಿಗೆ ಇದೆ. ಇದನ್ನು ಗಂಭೀರವಾಗಿ ಪರಿಗಣಿಸದೆ ಕಾರ್ಮಿಕರನ್ನೇ ನಂಬಿಕೊAಡರೆ ಸಮಸ್ಯೆ ಆಗಲಿದೆ ಎಂದರು.

ಟಾಟಾ ಕಾಫಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶÀಕ ಪಿ. ಎ. ಮಂದಣ್ಣ ಮಾತನಾಡಿ, ಸುಸ್ಥಿರ ಕಾಫಿ ಬೆಳೆಯತ್ತ ಪ್ರತಿ ಬೆಳಗಾರರೂ ಆದ್ಯತೆ ನೀಡುವಂತಾಗಬೇಕು. ಪರಿಸರ, ಆರ್ಥಿಕತೆ ಮತ್ತು ಸಾಮಾಜಿಕ ಸೇವೆಯತ್ತಲೂ ತೋಟ ಕೃಷಿಕರು ಗಮನ ಹರಿಸಬೇಕು. ಟಾಟಾ ಕಾಫಿ ಸಂಸ್ಥೆಯ ತೋಟಗಳಲ್ಲಿ ಪರಿಸರ ಸ್ನೇಹಿ ಪಲ್ಪರ್‌ಗಳು, ಮಳೆ ಕೊಯ್ಲು ವ್ಯವಸ್ಥೆಯನ್ನು ಸೂಕ್ತರೀತಿಯಲ್ಲಿ ನಿರ್ವಹಿಸಿರುವ ಪರಿಣಾಮವೇ ಮಣ್ಣಿನ ಫಲವತ್ತತೆ ಹೆಚ್ಚಳವಾಗಿ ಉತ್ಪಾದನೆ ಹೆಚ್ಚಳಕ್ಕೆ ಕಾರಣವಾಗಿದೆ, ಅಂತರ್ ಜಲದ ಮಟ್ಟದಲ್ಲಿಯೂ ಹೆಚ್ಚಳವಾಗಿದೆ ಎಂದು ಮಾಹಿತಿ ನೀಡಿದರು.

ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಎ. ನಂದ ಬೆಳ್ಯಪ್ಪ ಮಾತನಾಡಿ, ಕಳೆದ 1 ವರ್ಷದಲ್ಲಿ ಅಸೋಸಿಯೇಷನ್ ವತಿಯಿಂದ ಹಲವಾರು ಗಮನಾರ್ಹ ಯೋಜನೆ ಜಾರಿಗೊಳಿಸಲಾಗಿದೆ. ಜಮ್ಮ, ಸಾಗು ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಧ್ವನಿ ಎತ್ತಲಾಗಿದೆ. ಬೆಳೆಗಾರರಿಗೆ ಕಾಲದಿಂದ ಕಾಲಕ್ಕೆ ಅಗತ್ಯ ಮಾಹಿತಿ ನೀಡಿದ ಕೀರ್ತಿ ಸಂಸ್ಥೆಗೆ ಸಲ್ಲುತ್ತದೆ ಎಂದರು.

ತಜ್ಞರಾದ ಡಾ. ರಾಜಾ ವಿಜಯ್ ಕುಮಾರ್, ಯುನೆಟೈಡ್ ಕಿಂಗ್ ಡಮ್ ನ ಕೃಷಿ ಪರಿಣಿತ ಮಾರ್ಕ್ ತ್ರಿಸ್ನಿ, ಕೆ. ಸುದೀಂದ್ರ ಕಾಫಿ ಕೃಷಿ ಸಂಬAಧಿತ ವಿವಿಧ ವಿಚಾರಗಳ ಬಗ್ಗೆ ಪ್ರಾತಕ್ಷಿಕೆ ಮೂಲಕ ಉಪಯುಕ್ತ ಮಾಹಿತಿಗಳನ್ನು ಬೆಳೆಗಾರರಿಗೆ ನೀಡಿದರು.

ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಸಿ. ಕೆ. ಬೆಳ್ಳಿಯಪ್ಪ, ಉಪಾಧ್ಯಕ್ಷ ಎ. ಚಂಗಪ್ಪ, ಕರ್ನಾಟಕ ಕಾಫಿ ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆ ರಾಜೀವ್, ಕಾಫಿ ಮಂಡಳಿ ಸದಸ್ಯ ತಳೂರು ಕಿಶೋರ್ ಕುಮಾರ್, ಮಾಜಿ ಉಪಾಧ್ಯಕ್ಷ ನಡಿಕೇರಿಯಂಡ ಬೋಸ್ ಮಂದಣ್ಣ, ಬಿ ಡಿ ಮಂಜುನಾಥ್, ಮೋಹನ್ ದಾಸ್, ಕೆ ಪಿ ಉತ್ತಪ್ಪ ಸೇರಿದಂತೆ ಕಾಫಿ ಉದ್ಯಮದ ಅನೇಕರು ಹಾಜರಿದ್ದರು.

ವಿವಿಧ ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net