ಸಿಪಿಐ ಶಿವಶರಣ ಅವಜಿ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ

1Anand6
Published on

ಸಂಕೇಶ್ವರ: ದಲಿತ ಸಮುದಾಯ ಜನರೊಂದಿಗೆ ಸರಿಯಾಗಿ ಸ್ಪಂದಿಸದ ಸಿಪಿಐ ಶಿವಶರಣ ಅವಜಿ ಅವರನ್ನು ಠಾಣೆಯಿಂದ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ದಲಿತಪರ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಿದವು.

ಪಟ್ಟಣದ ಪುರಸಭೆಯ ಡಾ.ಬಿ.ಆರ್ ಅಂಬೇಡ್ಕರ್ ಉದ್ಯಾನವನದಿಂದ ಹಳೆ ಪಿ.ಬಿ. ರಸ್ತೆ ಮಾರ್ಗವಾಗಿ ಪ್ರತಿಭಟನೆ ನಡೆಸಿ ಹೆಚ್ಚುವರಿ ಎಸ್‌ಪಿ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಹಾಗೂ ಐಜಿಗೆ ಮನವಿ ಸಲ್ಲಿಸಿದರು.

ಬಿ.ಆರ್.ಅಂಬೇಡ್ಕರ್ ಜನ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ದೀಲಿಪ ಹೊಸಮನಿ ಮಾತನಾಡಿ, ಸಮಸ್ಯೆ ಹೇಳಿಕೊಂಡು ಠಾಣೆಗೆ ಹೋದವರ ಮೇಲೆಯೇ ಸಿಪಿಐ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕೂಡಲೇ ಮೇಲಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಮಲ್ಲಿಕಾರ್ಜುನ ರಾಶಿಂಗೆ, ರವಿ ಕಾಂಬಳೆ. ಮಂಜು ಮರಡಿ, ಕೆ.ವೆಂಕಟೇಶ, ರಾಜು ಮುತ್ತಾ, ರಾವಸಾಹೇಬ ಪಾಂಡ್ರೆ, ಲಕ್ಷ್ಮಣ ಹೂಲಿ, ರಾಜು ಸಾನೆ, ಅನಿಲ ಖಾತೆದಾರ, ಆಕಾಶ ನಡುಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net