ಸಿಪಿಐಎಂ ಜನಾಂದೋಲನಕ್ಕೆ ಚಾಲನೆ

25adarshkdga4
Published on

ಮಡಿಕೇರಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಕೊಡಗನ್ನು ಕಡೆಗಣಿಸಲಾಗಿದ್ದು, ಜಿಲ್ಲೆಯ ಜ್ವಲಂತ ಸಮಸ್ಯೆಗಳು ಬಗೆಹರಿಯದೆ ಉಳಿದುಕೊಂಡಿದೆ ಎಂದು ಆರೋಪಿಸಿರುವ ಭಾರತ ಕಮ್ಯುನಿಸ್ಟ್ ಪಕ್ಷದ ಕೊಡಗು ಜಿಲ್ಲಾ ಘಟಕ, ಒಂದು ವಾರದ ಜನಾಂದೋಲನಕ್ಕೆ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಚಾಲನೆ ನೀಡಲಾಯಿತು.


ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷಕ್ಕೆ ಜೈಕಾರ ಕೂಗುತ್ತಾ, ಬಿಜೆಪಿ ಸರ್ಕಾರದ ವಿರುದ್ಧ ಪಕ್ಷದ ಪ್ರಮುಖರು ಘೋಷಣೆ ಕೂಗಿದರು.


ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯ ಸಮಿತಿ ಸದಸ್ಯ ಗುರುಶಾಂತ್, ಬಜೆಟ್‌ನಲ್ಲಿ ಕೊಡಗಿಗೆ ಪ್ರತ್ಯೇಕ ಯೋಜನೆಗಳನ್ನು ಘೋಷಿಸಿಲ್ಲ. ಕಾರ್ಮಿಕರು, ರೈತರ ನಿರೀಕ್ಷೆಗಳೆಲ್ಲಾ ಹುಸಿಯಾಗಿದೆ. ಈ ಹಿನ್ನೆಲೆ ಜನಾಂದೋಲನದ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯ ವಿವಿಧೆಡೆ ಸಂಚರಿಸಿ ಸಭೆ ನಡೆಸಲಾಗುವುದು. ಸಂಜೆ ವೇಳೆ ಮನೆ ಮನೆಗೆ ತೆರಳಿ ಬಿಜೆಪಿ ಸರ್ಕಾರ ವೈಫಲ್ಯಗಳ ಕುರಿತು ಜನರಿಗೆ ಅರಿವು ಮೂಡಿಸಲಾಗುವುದು ಎಂದು ಮಾಹಿತಿ ನೀಡಿದರು.


ಉದ್ಯೋಗ ಸೃಷ್ಠಿ, ಸಾಲ ಮನ್ನಾ ಸೇರಿದಂತೆ ಜನರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು. ಕೊಡಗಿನ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.


ಈ ಸಂದರ್ಭ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಎಚ್.ಬಿ.ರಮೇಶ್, ಪ್ರಮುಖರಾದ ಕುಟ್ಟಪ್ಪನ್, ಶಾಜಿ, ಎ.ಸಿ.ಸಾಬು, ಸಿಐಟಿಯು ಸಂಘಟನೆ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net