

ಮಂಡ್ಯ: ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿಗೆ ವಿಧಿಸಿರುವ ದರವನ್ನು ಕಡಿಮೆ ಮಾಡಬೇಕೆಂದು ಆಗ್ರಹಿಸಿ ಸಿಪಿಐಎಂನಿಂದ ಜಲಮಂಡಳಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ನಗರದ ಬೆಳವಣಿಗೆಗೆ ಅನುಗುಣವಾಗಿ ನೀರು ನಿರ್ವಹಣೆಯಾಗುತ್ತಿಲ್ಲ. ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದೆ ನೈರ್ಮಲ್ಯ ಹದಗೆಟ್ಟಿದೆ. ಎಲ್ಲೆಂದರಲ್ಲಿ ಕೆಟ್ಟವಾಸನ ಬೀರುತ್ತಿದೆ. ಹಲವು ಬಡಾವಣೆಗೆ ನೀರು ಸರಿಯಾಗಿ ಪೂರೈಕೆ ಆಗುತ್ತಿಲ್ಲವೆಂದು ನಾಗರಿಕರು ಆರೋಪಿಸುತ್ತಿದ್ದಾರೆ. ಪ್ರತಿ ತಿಂಗಳು ನೀರಿಗೆ 282 ರೂ ಪಡೆಯಲಾಗುತ್ತಿತ್ತು. ಆದರೆ ಇದೀಗ ಇದ್ದಕ್ಕಿದ್ದಂತೆ 25 ರೂ ಏರಿಕೆ ಮಾಡಿರುವುದು ಖಂಡನೀಯ. ಆದ್ದರಿಂದ ನೀರಿನ ದರ ಕಡಿಮೆ ಮಾಡುವುದರ ಜತೆಗೆ ಹಿಂದಿನ ಬಾಕಿ ಬಿಲ್ ಅನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಟಿ.ಎಲ್.ಕೃಷ್ಣೇಗೌಡ, ಸಿ.ಕುಮಾರಿ, ಚಂದ್ರಶೇಖರ್, ಶಶಿಕಲಾ ಇದ್ದರು.