

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ) ವತಿಯಿಂದ ಬುಧವಾರ ನಗರದ ಎಫ್‌ಟಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿ ಕಾನೂನು ಜಾರಿಯಾಗಬೇಕು, ಎಲ್ಲ ದುಡಿಯುವ ಜನತೆಗೆ ಕನಿಷ್ಠ ವೇತನ 31,000 ರೂ. ಜಾರಿಯಾಗಬೇಕು, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು, ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಗೆ ಕೈಗಾರಿಕೆಗಳನ್ನು ಸ್ಥಾಪಿಸಬೇಕು, ಕೃಷಿ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಬೇಕು, ಜಿಲ್ಲೆಯ ದಲಿತರಿಗೆ ಸ್ಮಶಾನ ಒದಗಿಸಬೇಕು, ಜಿಲ್ಲೆಯಲ್ಲಿ ಸರ್ಕಾರಿ ಕಾನೂನು ಹಾಗೂ ಇಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಬೇಕು ಎಂದು ಒತ್ತಾಯಿಸಲಾಯಿತು. ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.