ತೈಲ ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂಎಲ್)ನಿAದ ಪ್ರತಿಭಟನೆ

RAICHUR
RAICHUR
Published on

 ರಾಯಚೂರು ಕೇಂದ್ರದ ಎನ್‌ಡಿಎ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಪೆಟ್ರೋಲ್, ಡೀಸೆಲ್, ಗ್ಯಾಸ್ ,ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದನ್ನು ವಿರೋಽಸಿ ಸಿಪಿಐ(ಎಂಎಲ್) ಲಿಬರೇಷನ್ ಪಕ್ಷದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ನಿರಂತರ ಏರಿಕೆಯಾಗಿದ್ದು, ಕೇಂದ್ರ ಸರ್ಕಾರದ ಮತ್ತು ರಾಜ್ಯ ಸರ್ಕಾರ ಇಂಧನದ ಬೆಲೆ ಏರಿಕೆ ಮೂಲಕ ಮತ್ತೊಮ್ಮೆ ಬರೆ ಎಳೆದಿದೆ. ಇಷ್ಟು ಪ್ರಮಾಣದ ಬೆಲೆ ಏರಿಕೆಯಾಗಿರುವುದು ಇದುವರೆಗಿನ ಇತಿಹಾಸದಲ್ಲಿಯೇ ಇಲ್ಲ. ಪೆಟ್ರೋಲ್ ಇಂದಿನ ದರ ೧೦೨.೯೨ ಪೈಸ್ ,ಡೀಸೆಲ್ ಇಂದಿನ ದರ ೯೧.೦೨ ಪೈಸೆ ಇದ್ದು, ಪ್ರತಿ ಲೀಟರ್ ೨ ರೂಪಾಯಿ ಹೆಚ್ಚಿಸಲಾಗಿದೆ.

ಮನಬಂದAತೆ ಇಂಧನ ಬೆಲೆ ಹೆಚ್ಚಿಸುವುದರಿಂದ ಸಾರಿಗೆ, ಸರಕು ಸಾಗಣೆ, ವ್ಯಾಪಾರ ವಹಿವಾಟು, ಕೃಷಿ, ಕೈಗಾರಿಕೆ ಸೇರಿ ಇನ್ನಿತರೆ ವಲಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಜನಸಾಮಾನ್ಯರು ಮತ್ತಷ್ಟು ಸಂಕಷ್ಟ ಎದುರಿಸಬೇಕಿದೆ ಎಂದು ಆಪಾದಿಸಿದರು.

ಸಿಪಿಐ(ಎಂಎಲ್) ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ನಾಗರಾಜ ಪೂಜಾರ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ,ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಹಾಲು, ನೀರು, ವಿದ್ಯುತ್, ಡೀಸೆಲ್ ಮತ್ತು ಮೆಟ್ರೋದರ ಸೇರಿದಂತೆ ಹಲವಾರು ಅಗತ್ಯ ಸೇವೆಗಳ ಬೆಲೆ ಏರಿಕೆ ಮಾಡಿದೆ.

ಜೊತ್ಯಾಜ್ಯ ಸಂಗ್ರಹ, ಟೋಲ್ ಶುಲ್ಕ ಮತ್ತು ಆಸ್ತಿ ತೆರಿಗೆಯ ಮೇಲಿನ ತೆರಿಗೆಗಳನ್ನೂ ಸಹ ಹೆಚ್ಚಿಸಲಾಗಿದೆ. ಬೆಲೆ ಏರಿಕೆಯಿಂದ ಸರ್ಕಾರಗಳು ಬಡವರು ಮತ್ತು ಮಧ್ಯಮ ವರ್ಗದವರನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ. ಆರ್ಥಿಕ ನೀತಿಗಳು ಜಾರಿ ಮಾಡವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಅಜೀಜ್ ಜಾಗೀರದಾರ್, ಆಂಜನೇಯ ಕುರುಬರ ದೊಡ್ಡಿ, ರವಿಚಂದ್ರ, ಆರ್.ಎಚ್ ಕಲಮಂಗಿ, ಬಸವರಾಜ ಎಕ್ಕಿ, ಶ್ರೀನಿವಾಸ ಬುಕ್ಕನಟ್ಟಿ, ಅನೀ-ï ಅಬಕಾರಿ, ಜಿಲಾನಿ, ಮೊಹಮ್ಮದ್ ಶಾಲಂ, ಪ್ರಕಾಶ್,ಬಸವರಾಜ ಸೇರಿ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net