

ವಿಜಯಪುರ: ಸೈಬರ್, ಆರ್ಥಿಕ ಮತ್ತು ಮಾದಕ ದೃವ್ಯ ಅಪರಾಧಗಳ ಪೊಲೀಸ್ ಠಾಣೆಯ ಸಿಪಿಐ ರಮೇಶ ಅವಜಿ ವರ್ಗಾವಣೆಯಾಗಿದ್ದು, ವಿಜಯಪುರ ನಗರ ಗ್ರಾಮೀಣ ಠಾಣೆಯ ವೃತ್ತ ನಿರೀಕ್ಷಕರಾಗಿ ಸೋಮವಾರ ಅಧಿಕಾರ ಸ್ವೀಕರಿಸಿದರು.
ಕಳೆದ ಹಲವು ವರ್ಷಗಳಿಂದ ಸೈಬರ್ ಠಾಣೆಯಲ್ಲಿ ಸೇವೆ ಸಲ್ಲಿಸಿದ್ದ ರಮೇಶ ಅವಜಿ ವಂಚನೆ ಪ್ರಕರಣಗಳಲ್ಲಿ ಹಣ ಕಳೆದುಕೊಂಡಿದ್ದ ಕೋಟ್ಯಂತರ ರೂಪಾಯಿಯನ್ನು ವಾಪಸ್ ಕೊಡಿಸುವಲ್ಲಿ ಸಫಲರಾಗಿದ್ದರು. ಎಸ್‌ಪಿ ಲಕ್ಷ್ಮಣ ನಿಂಬರಗಿ ಹಲವು ಪ್ರಕರಣಗಳಲ್ಲಿ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ದರು. ಇದೀಗ ಅವಜಿ ಅವರನ್ನು ಗ್ರಾಮೀಣ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ಠಾಣೆ ಸಿಬ್ಬಂದಿ ಹೂಗುಚ್ಚ ನೀಡಿ ಸ್ವಾಗತಿಸಿದರು.