ದೇವರಗುಡ್ಡ ಬಳಿ ಬಿರುಕುಬಿಟ್ಟ ರಸ್ತೆ

kls road
ದೇವರಗುಡ್ಡ ಆಶ್ರಮ ಬಳಿ ಮುಖ್ಯ ರಸ್ತೆಯಲ್ಲಿ ಬಿರುಕು ಬಿಟ್ಟಿರುವುದು.
Published on

ಕಳಸ: ತಾಲೂಕಿನಾದ್ಯಂತ ಮಳೆ ಅಬ್ಬರ ಕಡಿಮೆಯಾಗಿದ್ದರೂ ರಸ್ತೆ ಕುಸಿತ ಮುಂದುವರಿದಿದೆ.

ಕಳಸ-ಕುದುರೆಮುಖ ರಾಜ್ಯ ಹೆದ್ದಾರಿಯ ದೇವರಗುಡ್ಡ ಆಶ್ರಮ ಬಳಿ ಮುಖ್ಯ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಎರಡು ವರ್ಷಗಳ ಹಿಂದೆ ಇಲ್ಲಿ ತಡೆಗೋಡೆ ನಿರ್ಮಿಸಲಾಗಿತ್ತು. ಇದೇ ಸ್ಥಳದಲ್ಲಿ ಕಳೆದ ವರ್ಷವೂ ಸ್ವಲ್ಪ ಮಟ್ಟಿಗೆ ಬಿರುಕು ಕಾಣಿಸಿಕೊಂಡಿತ್ತು. ಆದರೆ ಕುಸಿದ ಸ್ಥಳದಲ್ಲಿ ಪಿಡಬ್ಲುೃಡಿಯಿಂದ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಈ ಬಾರಿ ಅದಕ್ಕಿಂತಲೂ ಹೆಚ್ಚು ಬಿರುಕು ಕಾಣಿಸಿಕೊಂಡಿದ್ದು, ಅಪಾಯದ ಸ್ಥಿತಿ ಎದುರಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net