

ಮೆಸೂರು: ಗಾನ ನಂದನ ಹಾಗೂ ಅಲೆಯನ್ಸ್ ಕ್ಲಬ್ ಆಫ್ ಮೆಸೂರು ನಾಲ್ವಡಿ ವತಿಯಿಂದ ನಗರದ ಜೆಎಲ್‌ಬಿ ರಸ್ತೆಯ ನಾದಬ್ರಹ್ಮ ಸಭಾಂಗಣದಲ್ಲಿ ಶನನಿವಾರ ಕ್ರೇಜಿ ಸ್ಟಾರ್ ವಿ. ರವಿಚಂದ್ರನ್ ಗಾಯನೋತ್ಸವ ನಡೆಯಿತು.
ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾಧ್ಯಕ್ಷ ನಾಗರಾಜ ವಿ. ಬೈರಿ ಸಹಕಾರದಲ್ಲಿ ಏರ್ಪಡಿಸಿದ್ದ ಈ ಕಾರ್ಯಕ್ರಮವನ್ನು ಅಲೆಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲ ಎಸ್. ವೆಂಕಟೇಶ್ ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ಅಲೆಯನ್ಸ್ ಕ್ಲಬ್ ಗಾಯನೋತ್ಸವದ ಜತೆಗೆ ವೃದ್ಧಾಶ್ರಮ, ಅನಾಥಾಶ್ರಮಗಳಲ್ಲಿ ಸೇವಾ ಕಾರ್ಯಗಳನ್ನು ನಡೆಸಲಿದೆ, ಸಮಾಜ ಸೇವಾ ಕಾರ್ಯಗಳಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ವಿಶೇಷ ಆಹ್ವಾನಿತರಾಗಿದ್ದರು. ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಮಾಜಿ ಅಧ್ಯಕ್ಷ ಡಾ.ವೈ.ಡಿ. ರಾಜಣ್ಣ, ಸಮಾಜ ಸೇವಕ ಕೆ. ರಘುರಾಂ ವಾಜಪೇಯಿ, ಅಲೆಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಡಾ.ಬಿ.ಎನ್. ರವೀಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ತರಬೇತಿ ಕೇಂದ್ರದ ಉಪ ನಿರ್ದೇಶಕ ಡಾ.ಎಲ್. ರವಿ ಮುಖ್ಯ ಅತಿಥಿಗಳಾಗಿದ್ದರು. ಇಂದಿರಾ ವೆಂಕಟೇಶ್, ಸುನೀತಾ ಬೆಟ್ಟೇಗೌಡ. ಸೌಮ್ಯಾ ಇದ್ದರು.