ಆಂತರಿಕ ದೂರು ಸಮಿತಿ ರಚಿಸಿ

WEB LOGO
Published on

ವಿಜಯಪುರ: ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಒಂದು ವಾರದೊಳಗಾಗಿ ಆಂತರಿಕ ದೂರು ಸಮಿತಿ ಕಡ್ಡಾಯವಾಗಿ ರಚಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೆಲಸದ ಸಮಯದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ತಡೆ ಕಾಯ್ದೆ ಶೀ&ಬಾಕ್ಸ್​ ಕುರಿತ ಶನಿವಾರ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸವೋರ್ಚ್ಛ ನ್ಯಾಯಾಲಯದ ತೀರ್ಪಿನನ್ವಯ ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳೆಯರಿಗೆ ಆಗುತ್ತಿರುವ ತೊಂದರೆ, ದೌರ್ಜನ್ಯ, ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ತಡೆಗಟ್ಟಲು ಕೇಂದ್ರ ಸರ್ಕಾದಿಂದ ಅಧಿನಿಯಮ&2013 ಜಾರಿಗೊಳಿಸಲಾಗಿದೆ. ಹತ್ತಕ್ಕಿಂತ ಹೆಚ್ಚು ಜನ ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ಹಾಗೂ ಸಾರ್ವನಿಕ ವಲಯದ ಸಂಸ್ಥೆಗಳು, ಸರ್ಕಾರಿ, ಖಾಸಗಿ, ನಿಗಮ ಮಂಡಳಿ, ಸಾರ್ವಜನಿಕ ಉದ್ದಿಮೆ, ಕಾರ್ಖಾನೆಗಳು, ಖಾಸಗಿ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ, ಖಾಸಗಿ ಆಸ್ಪತ್ರೆ ಸೇರಿದಂತೆ ಎಲ್ಲ ಕಚೇರಿಗಳಿಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಹಾಗೂ ಜಿಲ್ಲಾ ಮಟ್ಟದಲ್ಲಿಯೂ ಕೂಡ ಸ್ಥಳಿಯ ದೂರು ಸಮಿತಿ ರಚಿಸುವುದು ಕಡ್ಡಾಯವಾಗಿದೆ ಎಂದು ಹೇಳಿದರು.

ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆಗಳು, ಸಾರ್ವಜನಿಕ ಸಂಸ್ಥೆಗಳು ತ್ವರಿತವಾಗಿ ಸಮಿತಿಗಳನ್ನು ರಚಿಸಬೇಕು. ಸಮಿತಿ ರಚಿಸಿದ ಕುರಿತು ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರಿಗೆ ಕಚೇರಿಗಳ ಪ್ರದರ್ಶನ ಫಲಕಗಳಲ್ಲಿ ಪ್ರದರ್ಶಿಸುವಂತೆ ಅವರು ತಾಕೀತು ಮಾಡಿದರು.

ಜಿಲ್ಲೆಯ ಪ್ರತಿಯೊಂದು ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಣ್ಣು ಮಕ್ಕಳಿಗಾಗಿ ವಿಶ್ರಾಂತಿ ಕೊಠಡಿ ಕಾಯ್ದಿರಿಸುವುದು ಕಡ್ಡಾಯ. ಕೊಠಡಿ ಕಾಯ್ದಿರಿಸಿದ ಕುರಿತು ಮಾಹಿತಿ ಒದಗಿಸಬೇಕು. ಸಾರ್ವಜನಿಕ ವಲಯದ ಸಂಸ್ಥೆಗಳು, ಸರ್ಕಾರಿ, ಖಾಸಗಿ, ನಿಗಮ ಮಂಡಳಿ, ಸಾರ್ವಜನಿಕ ಉದ್ದಿಮೆ, ಕಾರ್ಖಾನೆಗಳು, ಖಾಸಗಿ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ, ಖಾಸಗಿ ಆಸ್ಪತ್ರೆ ಸೇರಿದಂತೆ ಎಲ್ಲ ಕಚೇರಿಗಳು ಒಂದು ವಾರದೊಳಗೆ ಸಮಿತಿ ರಚಿಸಬೇಕು ಸಮಿತಿ ರಚಿಸದೆ ಇರುವವರ ವಿರುದ್ಧ ಕಾನೂನಿನ ರೀತಿ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸರ್ಕಾರಿ ಕಚೇರಿಗಳಲ್ಲಿ ಸಮಿತಿ ರಚಿಸಿದ ಕುರಿತು ಕೆಲವು ಇಲಾಖೆಗಳ ಮಾಹಿತಿ ಬಾಕಿ ಉಳಿದ ಇಲಾಖೆಗಳು ತ್ವರಿತವಾಗಿ ಸಮಿತಿ ರಚಿಸಿಕೊಂಡು, ಸಮಿತಿ ರಚಿಸಿದ ವರದಿಯ ವಿವರಗಳನ್ನು ನೀಡುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ. ಚವ್ಹಾಣ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net