ಖಾತ್ರಿ ಯೋಜನೆ, ನೀರಿನ ಬಳಕೆ ಅರಿವು ಮೂಡಿಸಿ

13byd1
Published on

ಬ್ಯಾಡಗಿ: ಪ್ರಸಕ್ತ ಸಾಲಿನಲ್ಲಿ ಬರಗಾಲ ತೀವ್ರತೆ ಹೆಚ್ಚುವ ಸಾಧ್ಯತೆಯಿದ್ದು, ಸರ್ಕಾರದ ನಿರ್ದೇಶನದಂತೆ ಉದ್ಯೋಗ ಖಾತ್ರಿ ಯೋಜನೆ ಹಾಗೂ ನೀರಿನ ಬಳಕೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಮಲ್ಲಿಕಾರ್ಜುನ ತಿಳಿಸಿದರು.

ತಾ.ಪಂ. ಸುವರ್ಣ ಸೌಧದಲ್ಲಿ ಶುಕ್ರವಾರ ಉದ್ಯೋಗ ಖಾತ್ರಿ ಯೋಜನೆ ಕಾಯಕಮಿತ್ರ ಹಾಗೂ ಕಾಯಕಬಂಧುಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಾಲೂಕಿನ 21 ಗ್ರಾಮ ಪಂಚಾಯಿತಿಗಳಲ್ಲಿ ನಿಗದಿಪಡಿಸಿದ ಉದ್ಯೋಗ ಖಾತ್ರಿ ಯೋಜನೆ ಗುರಿ ತಲುಪಬೇಕಿದೆ. ಪಿಡಿಒ, ಕಾಯಕಮಿತ್ರ ಹಾಗೂ ಕಾಯಕ ಬಂಧುಗಳ ಅನುಷ್ಠಾನಗೊಳಿಸಲು ಶ್ರಮಿಸಬೇಕು. ಸರ್ಕಾರದ ನಿರ್ದೇಶನದಂತೆ ನರೇಗಾ ಕೂಲಿಕಾರರಿಗೆ ಸಕಾಲಕ್ಕೆ ಕೆಲಸ ಒದಗಿಸುವ ಮೂಲಕ ಅರ್ಜಿ ಸಲ್ಲಿಸಿದ ಎಲ್ಲರನ್ನೂ ಕೆಲಸದಲ್ಲಿ ತೊಡಗಿಸಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ಹಾಗೂ ಪಿಡಿಒ ನಾಗರಾಜ ಹಡಗಲಿ, ಪರಶುರಾಮ ಅಗಸನಹಳ್ಳಿ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆ ಕೂಲಿಕಾರ್ವಿುಕರ ಹೆಚ್ಚಳಕ್ಕೆ ಒತ್ತು ನೀಡುವುದು, ಯೋಜನೆ ಜಾಗೃತಿ, ಕುಂದುಕೊರತೆ ಇತ್ಯಾದಿ ಬಗ್ಗೆ ತರಬೇತಿಯಲ್ಲಿ ಮಾಹಿತಿ ನೀಡಲಾಗುವುದು. ಮುಖ್ಯವಾಗಿ ಕಾಯಕಬಂಧುಗಳ ಕರ್ತವ್ಯ, ನಿರ್ವಹಿಸಬೇಕಾದ ಕರ್ತವ್ಯಗಳು, ಕೆಲಸದ ಸ್ಥಳ, ಅಳತೆ ನಿಯಮ ಇತ್ಯಾದಿಗಳ ಮಾಹಿತಿ ನೀಡಲಾಯಿತು.
ತಾ.ಪಂ. ವ್ಯವಸ್ಥಾಪಕ ಪ್ರಕಾಶ ಹಿರೇಮಠ, ನರೇಗಾ ಯೋಜನೆ ಅನುಷ್ಠಾನ ಸಹಾಯಕ ನಿರ್ದೇಶಕ ಶಂಕರ ಕಿಚಡಿ, ಸಂಯೋಜಕ ಶಾನವಾಜ್ ಚಿಣಗಿ, ಧರ್ಮಣ್ಣ ಆಡಿನವರ, ಪಿಡಿಒ ಗದಿಗೆಪ್ಪ ಕೊಪ್ಪದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net